8ರಂದು ಉಚಿತ ವನೌಷಧಿ ವಿತರಣೆ
ರಾಯಚೂರು: ಮೃಗಶಿರ ನಕ್ಷತ್ರದ ದಿನವಾದ ಅಸ್ತಮಾ ಮತ್ತು ಅಲಿರ್ಜ ರೋಗಗಳಿಗೆ ಜೂ.8ರಂದು ನಗರದ ನ್ಯಾಷನಲ್ ಹೋಮಿಯೋ ಸ್ಟೋರ್ಸ್ ವತಿಯಿಂದ ಉಚಿತವಾಗಿ ವನೌಷಧಿ ನೀಡಲಾಗುತ್ತದೆ. ಈ ಕುರಿತು ಪ್ರಕಟಣೆ ನೀಡಿರುವ ಹೋಮಿಯೋಪತಿ ವೈದ್ಯ ಡಾ. ಎಂ.ಜೆ.ಅಲಿ ಅವರು, ನಗರದ ಜಿಲ್ಲಾ ಕಾರಾಗೃಹ ಬಳಿಯಿರುವ ಸ್ಟೋರ್ಸ್ನಲ್ಲಿ ಅಂದು ಬೆ.9 ರಿಂದ ಮ.2ರ ವರೆಗೆಮತ್ತು ಮ.3ರಿಂದ ಸಂಜೆ 6ರವರೆಗೆ ಅಸ್ತಮಾ ಮತ್ತು ಅಲರ್ಜಿ ರೋಗಗಳಿಗೆ ಉಚಿತವಾಗಿ ವನೌಷಧಿಯನ್ನು ವಿತರಿಸಲಾಗುತ್ತದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ತಿಳಿಸಿದ್ದಾರೆ.
ಇಂದು ವಿದ್ಯುತ್ ವ್ಯತ್ಯಯ
ರಾಯಚೂರು: ತಾಲೂಕಿನ ಯರಗೇರಾ ಮತ್ತು ಮಲಿಯಾಬಾದ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಹಿನ್ನೆಲೆ ಯರಗೇರಾ ಮತ್ತು ಮಲಿಯಾಬಾದ್ ಸೇರಿ ಸುತ್ತಲಿನ ಗ್ರಾಮಗಳಲ್ಲಿ ಜೂ.6 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಕುರಿತು ಜೆಸ್ಕಾಂ ಪ್ರಕಟಣೆ ನೀಡಿದ್ದು, ಅಂದು ಮಧ್ಯಾಹ್ನ 12ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಡಿಕ್ಕಿ: ಬಾಲಕ ಸಾವು
ರಾಯಚೂರು: ಮಾನವಿ ತಾಲೂಕಿನ ಹಿರೇಕೊಟ್ನೇಕಲ್ ಗ್ರಾಮದ ಬಳಿ ರಸ್ತೆ ಬದಿ ನಿಂತಿದ್ದ ಬಾಲಕಗೆ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ. ಮೃತನನ್ನು ಪ್ರೇಮಕುಮಾರ್(7) ಎಂದು ಗುರುತಿಸಲಾಗಿದೆ. ಈತ ರಸ್ತೆ ಬದಿಗೆ ನಿಂತಿದ್ದಾಗ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಆತನನ್ನು ಮಾನವಿ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

