ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ: ಸಿದ್ರಾಂಪುರ
ಸಿಂಧನೂರು: ಶಿಕ್ಷಣ ಎಂಬುದು ಒಳ್ಳೆಯ ಹಣ್ಣಿನ ಬೀಜವಿದ್ದಂತೆ. ಅದನ್ನು ಸರಿಯಾಗಿ ಬೆಳೆಸಿದರೆ ಅದು ಮರವಾಗಿ ಬೆಳೆದು ಒಳ್ಳೆಯ ಹಣ್ಣುಗಳನ್ನು ಕೊಡುತ್ತದೆ. ಹಾಗೆಯೇ ಪ್ರತಿ ಮಗುವಿನಲ್ಲಿ ಶ್ರೇಷ್ಠ ವ್ಯಕ್ತಿಯಾಗುವ ಶಕ್ತಿಯಿದೆ. ಆ ಮಗುವಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಬೆಳೆಸಬೇಕೆಂದು ಸೃಷ್ಟಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಉಮೇಶ ಡಿ.ಸಿದ್ರಾಂಪುರ ಕರೆ ನೀಡಿದರು.
ನಗರದಲ್ಲಿ ಬುಧವಾರ ಸೃಷ್ಟಿ ಸ್ವತಂತ್ರ ಪದವಿ ಪೂರ್ವ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರ ಮಾಲಿನ್ಯದ ಕುರಿತು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಟ್ರಸ್ಟ್ಗಳಿಂದ ನಡೆಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚಿದಾನಂದ ಟಿ., ಹನುಮೇಶ ಗುಮಗೇರಿ, ವೀರೇಶ, ಶರಣಬಸವ ಗಾಜಿ, ವೀರೇಶ ಗೋಮರ್ಸಿ, ಅಮರೇಗೌಡ, ಅಮರೇಶ, ಯಮನೂರಪ್ಪ, ಅಂದಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಟ್ರಸ್ಟಿಗಳಾದ ಎಸ್.ಬಿ. ಜೋಷಿ, ಕೆ.ಮಹೇಶ, ಶಾಮಸುಂದರ, ರಮೇಶ ವಿಟ್ಲಾಪೂರ, ಪಂಪಣ್ಣ ಕುರಕುಂದಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಪ್ರಹ್ಲಾದ, ರಮೇಶ, ರವಿತೇಜ, ಫಾರಕ್, ಚೌಡಮ್ಮ, ಗೌಸಿಯಾ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

