12ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ನಿರ್ಧಾರ
ರಾಯಚೂರು: ಜಿಲ್ಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜೂ.12 ರಂದು ಆಚರಿಸಲು ಈಚೇಗೆ ನಡೆದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಅಂದು ಬೆಳಗ್ಗೆ 8.30ಕ್ಕೆ ಸೈಕಲ್.4
ಾರೋಪಗೊಳಿಸಲಾಗುತ್ತದೆ ಎಂದು ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ಸಭೆಗೆ ತಿಳಿಸಿದರು.
ನೌಕರಿಯಿಂದ ವಜಾ:14 ವರ್ಷದೊಳಗಿನ ಮಕ್ಕಳನ್ನು ಮನೆ ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸೂಚಿಸುವುದು ತಪ್ಪಿದಲ್ಲಿ ಶಿಕ್ಷೆಗೆ ಗುರಿಯಾಗುವ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಸುವುದು, ನೇಮಿಸಿಕೊಂಡವರು ಸರ್ಕಾರಿ ಉದ್ಯೋಗಿಯಾಗಿದ್ದರೆ ನೌಕರಿಯಿಂದ ವಜಾಗೊಳಿಸುವ ಬಗ್ಗೆಯೂ ಮಾಹಿತಿ ನೀಡುವ ಕಾರ್ಯ ಮಾಡುವುದಾಗಿ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ್, ಬಾಲ್ಯ ವಿವಾಹ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ನಿಷೇಧ ಎಂಬ ತಿಳಿವಳಿಕೆ ಸಾರ್ವಜನಿಕರಲ್ಲಿ ಮೂಡಿಸಬೇಕಾಗಿದೆ. ಈ ಕುರಿತು ಎಲ್ಲರೂ ಪ್ರತಿಜ್ಞಾ ವಿಧಿ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜವಾಬ್ದಾರಿಯುತ ಕೆಲಸ ನಿರ್ವಸಿ: ಜಿಲ್ಲೆಯ 47 ಅಧಿಕಾರಿಗಳನ್ನು ಬಾಲ್ಯವಿವಾಹ ನಿಷೇಧ ಅಧಿಕಾರಿಗಳೆಂದು ನೇಮಿಸಲಾಗಿದ್ದು, ಗ್ರಾಪಂ ಮಟ್ಟದಲ್ಲಿ ಬಾಲ್ಯವಿವಾಹ ಜರುಗದಂತೆ ಅವರು ಕ್ರಮ ಜರುಗಿಸಬೇಕು. ಗ್ರಾಮ ಮಟ್ಟದಲ್ಲಿ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು, ಶಾಲೆಯ ಮುಖ್ಯ ಗುರುಗಳು ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಜಿಪಂ ಸಿಇಒ ಜ್ಞಾನ ಪ್ರಕಾಶ್, ಸಿಪಿಐ ಜಿ. ಚಂದ್ರಕಾಂತ, ಬಾಲ ಕಾರ್ಮಿಕ ಶಾಲಾ ಆಡಳಿತ ಮಂಡಳಿಗಳ ಶಾಂತರಾಮ್ ಹೆಗ್ಡೆ, ಸಿದ್ದಲಿಂಗಗೌಡ, ಆರ್. ಕಿಶನರಾವ್, ಮೋಹನ್ ಪತ್ತಾರ, ಆಶೋಕ ಕಾಮತ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್, ಬಿಇಒ ಮಲ್ಲಿಕಾರ್ಜುನ, ಯುನಿಸೆಫ್ ಅಧಿಕಾರಿ ರಾಘವೆಂದ್ರ ಭಟ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

