ಆರ್ಟಿಇ ಜಾರಿಗೆ ಆಗ್ರಹ
ಕನ್ನಡಪ್ರಭ ವಾರ್ತೆ ಸಿಂಧನೂರು ಜೂ.7
ಶಿಕ್ಷಣ ಹಕ್ಕು ಕಾಯ್ದೆಯನ್ನು ರಾಜ್ಯ ಸರ್ಕಾರ ಸಮರ್ಪಕ ಜಾರಿಗೊಳಿಸಬೇಕೆಂದು ಎಸ್ಐಒ ಪದಾಧಿಕಾರಿಗಳು ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಾಗಿ ಮೂರು ವರ್ಷ ಕಳೆದರೂ ಸಮಸ್ಯೆ ಬಗೆಹರಿದಿಲ್ಲ. ಶಿಕ್ಷಣ ಹಕ್ಕು ಕಾಯ್ದೆಯಂತೆ ಖಾಸಗಿ ಶಾಲೆಗಳಲ್ಲಿ ಶೇ. 25ರಷ್ಟು ಉಚಿತ ಸೀಟು ನೀಡಬೇಕು. ಕಾಯ್ದೆ ಇತರ ಆಯಾಮಗಳನ್ನು ಹೆಚ್ಚಾಗಿ ಪ್ರಚಾರ ಮಾಡಿಲ್ಲ. ಸಾರ್ವಜನಿಕರಲ್ಲಿಯೂ ಆರ್ಟಿಇ ಎಂದರೆ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು ಎಂಬ ಭಾವನೆ ಇದೆ. ಸೀಟು ನಿರಾಕರಣೆ, ಅಲ್ಪಸಂಖ್ಯಾತರ ಶಾಲೆ ಎಂದು ಸುಳ್ಳು ಮಾಹಿತಿ ನೀಡುವುದು. ಮಕ್ಕಳಿಗೆ ಮತ್ತು ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸುವುದು ಹೀಗೆ ಹಲವಾರು ದೂರುಗಳು ವರದಿಯಾಗಿವೆ.
ಸಮಜಾಯಿಷಿ ಸರಿಯಲ್ಲ: ಅಲ್ಪಸಂಖ್ಯಾತರಿಗೆ ಯಾವುದೇ ರಿಯಾಯಿತಿ ನೀಡದೆ ಕೇವಲ ಶಿಕ್ಷಣದ ವ್ಯಾಪಾರೀಕರಣ ನಡೆಸುವ ಹಲವು ಶಾಲೆಗಳು ಉಚಿತ ಸೀಟುಗಳ ವಿಚಾರಕ್ಕೆ ಬಂದಾಗ ಅಲ್ಪಸಂಖ್ಯಾತರ ಶಾಲೆಗಳೆಂದು ಹೇಳಿ ತಪ್ಪಿಸಿಕೊಳ್ಳುತ್ತಿವೆ. ಸರ್ಕಾರ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಶೇ. 75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿರಬೇಕೆಂದು ನಿಗದಿಪಡಿಸಿದೆ. ಆರ್ಟಿಇ ಗುಣಮಟ್ಟದ ಶಿಕ್ಷಣ, ಉತ್ತಮ ಶಿಕ್ಷಕರು, ಆಟದ ಮೈದಾನ, ಶೌಚಾಲಯ ಮತ್ತು ಇತರ ಸೌಲಭ್ಯಗಳ ಬಗೆಗಿರುವ ವಿಚಾರ ಸರ್ಕಾರ ಮರೆತಿದೆ.
ಸಮರ್ಪಕ ಜಾರಿಗೆ ಒತ್ತಾಯ: ಎಸ್ಐಒ ಕಳೆದ ವರ್ಷ 15 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ- ಡಿ ಗ್ರೂಪ್ ನೌಕರರಿಲ್ಲದ, ಶೌಚಾಲಯ, ಶಿಕ್ಷಕರು ಹಾಗೂ ಆಟದ ಮೈದಾನವಿಲ್ಲದ ಸಾಕಷ್ಟು ಶಾಲೆಗಳು ಕರ್ನಾಟಕದಲ್ಲಿವೆ. ಅದಕ್ಕಾಗಿ ಸರ್ಕಾರ ಯಾವುದೇ ಕಾರಣಕ್ಕೂ ತಡ ಮಾಡದೇ ಆರ್ಟಿಇ ಕಾಯ್ದೆ ಸಮರ್ಪಕ ಜಾರಿಗೊಳಿಸಬೇಕೆಂದು ಮನವಿಯಲ್ಲಿ ತಾಲೂಕು ಕಾರ್ಯದರ್ಶಿ ವಸೀಮ್ ಅಹ್ಮದ್ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಅಲಿ ಮುರ್ತುಜಾ, ಸೈಯದ್ ತನ್ವೀರ್, ಜಾಕೀರ್ ಅಮೀರ್, ಅಸ್ತಪ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

