ರಸಗೊಬ್ಬರ ವಿತರಣೆಗೆ ರೈತ ಸಂಘ ಒತ್ತಾಯ
ಲಿಂಗಸ್ಗೂರು: ತಾಲೂಕಿನ ಎಲ್ಲ ಸಹಕಾರಿ ಸಂಘಗಳ ಮೂಲಕ ಅಗತ್ಯ ರಸಗೊಬ್ಬರ ವಿತರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ನೇತೃತ್ವದಲ್ಲಿ ಸಹಾಯಕ ಆಯುಕ್ತರಿಗೆ ಶುಕ್ರವಾರ ರೈತರು ಒತ್ತಾಯಿಸಿದರು. ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಆರಂಭಗೊಂಡಿದ್ದು, ಸೂರ್ಯಕಾಂತಿ, ಹೆಸರು, ಎಳ್ಳು, ಹತ್ತಿ ಸೇರಿದಂತೆ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ರೈತ ಸಂಪರ್ಕ ಕೇಂದ್ರಗಳ ಮೂಲಕ ಬ್ರಾಂಡೆಡ್ ಬಿತ್ತನೆ ಬೀಜಗಳನ್ನು ವಿತರಣೆ ಮಾಡಬೇಕು. ಖಾಸಗಿ ಅಂಗಡಿಗಳಲ್ಲಿ ರಸಗೊಬ್ಬರದ ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 30 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುವುದಾಗಿ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರಿಂದ ಮಾಹಿತಿ ಲಭ್ಯವಾಗಿದೆ. ಕಾರಣ ಕಳೆದ ವರ್ಷದಂತೆ ಈ ಬಾರಿ ಎಲ್ಲ ಸೊಸೈಟಿಗಳ ಮೂಲಕ ರಸಗೊಬ್ಬರ ವಿತರಣೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು. ಇದಕ್ಕೆ ಸಹಾಯಕ ಆಯುಕ್ತ ಟಿ. ಯೋಗೇಶ್ ಪ್ರತಿಕ್ರಿಯೆ ವ್ಯಕ್ತಪಡಿಸಿ, ಜೂ.10ರಂದು ಸೋಮವಾರ ಸಹಕಾರಿ ಸಂಘಗಳ ಮತ್ತು ರೈತರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮುಖಂಡರಾದ ಸಿದ್ಧನಗೌಡ ಬಯ್ಯಾಪುರ, ಬಸವರಾಜ ಗೋನವಾಟ್ಲ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

