ರಾಯಚೂರು

ಬಸವರತ್ನ ಪ್ರಶಸ್ತಿಗೆ ಅರ್ಜಿ

Published On :

ರಾಯಚೂರು: ಬಿಜಾಪುರ ತಾಲೂಕಿನ ಆಹೇರಿ ಗ್ರಾಮದ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕೃತಿ ವೇದಿಕೆಯಿಂದ ಬಸವ ಜಯಂತಿ ಹಾಗೂ ರಾಜ್ಯ ಮಟ್ಟದ ವಚನೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದವರಿಗೆ ಪ್ರಸಕ್ತ ಸಾಲಿಗೆ ಬಸವಜ್ಯೋತಿ ರಾಜ್ಯ ಪ್ರಶಸ್ತಿ ಹಾಗೂ ಬಸವರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಕರೆಯಲಾಗಿದೆ.
ಸಮಾಜದ ಪ್ರಗತಿಗೆ ಕನ್ನಡ ರಕ್ಷಣೆ, ಸಂಸ್ಕೃತಿ, ನಾಟಕ ಸೇರಿದಂತೆ ವಿವಿಧ ರಂಗಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಜತೆಗೆ ಮೂರು ಭಾವಚಿತ್ರ, ತಾವು ಮಾಡಿದ ಸಾಧನೆಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಎಲ್ಲ ಮಾಹಿತಿಯಿರುವ ವಿವರವನ್ನು ಬಂಡೆಪ್ಪ ತೇಲಿ, ಅಧ್ಯಕ್ಷರು, ಶ್ರೀಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕೃತಿ ವೇದಿಕೆ, ಆಹೇರಿ, ಬಿಜಾಪುರ ತಾಲೂಕು ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 90088 45750ಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.