ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ವಿಜೃಂಭಿಸಲಿ: ನುಗಡೋಣಿ
ಕನ್ನಡಪ್ರಭ ವಾರ್ತೆ ರಾಯಚೂರು ಜೂ.8
ಸಾಮಾಜಿಕ ಸಮಸ್ಯೆಗಳ ಬಗ್ಗೆ ಕಳಕಳಿಯಿರುವ ಸಾಹಿತ್ಯ ರಚನೆಯ ಅವಶ್ಯಕತೆಯನ್ನು ಪ್ರತಿಪಾದಿಸಿದ ಹಿರಿಯ ಸಾಹಿತಿ ಡಾ. ಅಮರೇಶ ನುಗಡೋಣಿ, ಸಾಹಿತ್ಯದ ಮೂಲಕ ಸಮಾಜದ ಎಲ್ಲ ಸಮಸ್ಯೆಗಳನ್ನು ಬಿಂಬಿಸುವ ಕಾರ್ಯ ಆಗಬೇಕಿದೆ. ಕೇವಲ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಸಾಹಿತ್ಯ ರಚಿಸುವುದು ಅಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮಾನವಿ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸಾಹಿತ್ಯ ಎಂಬುದು ಅನುಭವದಿಂದ ಮೂಡಿ ಬರಬೇಕೇ ವಿನಾ ಕುಳಿತಲ್ಲೇ ಬರೆಯುವುದಲ್ಲ ಎಂದು ಹೇಳಿದರು.
ಸಮಸ್ಯೆಗಳ ಚರ್ಚೆಗೆ ವೇದಿಕೆಯಾಗಲಿ: ಸಾಹಿತಿಗಳಾಗಬೇಕೆಂದು ಸಾಹಿತ್ಯ ರಚನೆ ಸಲ್ಲದು. ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿಯ ಅಂಶಗಳನ್ನು ಬಿಂಬಿಸಬೇಕು. ಸಾಹಿತ್ಯ ಮಾಯಾಲೋಕದಲ್ಲಿದೆ ಎಂದು ಭಾವಿಸಬೇಕಿಲ್ಲ. ವರ್ತಮಾನಗಳ ಕುರಿತು ಚರ್ಚೆಯಾಗಬೇಕು. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಸಾಹಿತ್ಯ ಸಮ್ಮೇಳನ ವೇದಿಕೆಯಾಗಬೇಕೆಂದು ಅವರು ಸಲಹೆ ನೀಡಿದರು.
ರಾಜ್ಯದಲ್ಲೇ ಈ ಪ್ರದೇಶ ಶೈಕ್ಷಣಿಕವಾಗಿ ಹಿಂದುಳಿದಿದೆ. ವಿದ್ಯಾರ್ಥಿಗಳಿಗೆ ಸಮರ್ಪಕ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಪರಿಣಾಮ ಫಲಿತಾಂಶದಲ್ಲಿ ಸಾಧನೆ ಕಳಪೆಯಾಗುತ್ತದೆ. ಪ್ರದೇಶದ ಶೈಕ್ಷಣಿಕ ಪ್ರಗತಿಗೆ ರಾಜಕೀಯ ನಾಯಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತಿಸಬೇಕಿದೆ ಎಂದು ಹೇಳಿದರು.
ಕೃಷಿ ಪದ್ಧತಿಯಲ್ಲಿ ಮಾರ್ಪಾಡು ಅಗತ್ಯ: ಪ್ರತಿಯೊಬ್ಬರಲ್ಲಿ ಸಾಹಿತ್ಯದ ಕುರಿತು ಆಸಕ್ತಿ ಮೂಡಿಸುವ ಕಾರ್ಯ ಆಗಬೇಕಿದೆ. ಸಮಾಜದ ಕೆಳ ವರ್ಗದವರ ಬಗ್ಗೆ ಹಾಗೂ ರೈತರು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ಅವಶ್ಯ. ಕೃಷಿ ಪದ್ಧತಿಯಲ್ಲಿ ಸಾಕಷ್ಟು ಮಾರ್ಪಾಡು ಆಗಬೇಕು. ಸಾವಯವ ಕೃಷಿ, ತೋಟಗಾರಿಕೆಗೆ ರೈತರು ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಕೃಷಿಯಲ್ಲಿ ನಷ್ಟದಿಂದ ಹೊರಬರುವ ಬಗ್ಗೆ ಚಿಂತನೆ ಅಗತ್ಯ ಎಂದರು.
ಉದ್ಘಾಟನೆ ಸಮಾರಂಭದಲ್ಲಿ ಸಾಹಿತ್ಯ ಸಮ್ಮೆಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್. ಬೋಸರಾಜ್, ಮಾನವಿ ಶಾಸಕ ಹಂಪಯ್ಯ ನಾಯಕ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ತಿಪ್ಪಣ್ಣ ಹೂಗಾರ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

