ರಾಯಚೂರು

ಬೋಗಸ್ ಪಡಿತರ ಚೀಟಿ; ಪರವಾನಗಿ ಅಮಾನತು

Published On :

ರಾಯಚೂರು: ನಗರದ ಹರಿಜನವಾಡ ಪ್ರದೇಶದಲ್ಲಿನ ಎರಡು ನ್ಯಾಯಬೆಲೆ ಅಂಗಡಿಗಳ ವಿರುದ್ಧ ಬೋಗಸ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಕೇಳಿ ಬಂದಿದ್ದ ಆರೋಪ ತನಿಖೆಯಿಂದ ಸಾಬೀತಾಗಿದ್ದರಿಂದ ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹರಿಜನವಾಡ ಪ್ರದೇಶದಲ್ಲಿರುವ ಗಣೇಶ್ ಮತ್ತು ಸಿಸಿಎಸ್ ನ್ಯಾಯಬೆಲೆ ಅಂಗಡಿಗಳ ಮಾಲೀಕರು ಬೋಗಸ್ ಪಡಿತರ ಚೀಟಿಗಳನ್ನು ಸೃಷ್ಟಿಸಿ ಆ ಮೂಲಕ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆಂದು ಹರಿಜನವಾಡ ಪ್ರದೇಶದ ಡಾ. ಬಾಬು ಜಗಜೀವನರಾಂ ಆದರ್ಶ ಯುವಕ ಸಂಘ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಮೂಲಕ ತನಿಖೆಗೆ ಮುಂದಾಗಿದ್ದರು. ತನಿಖೆಯ ವರದಿಯಾಧರಿಸಿ ಈ ಎರಡೂ ನ್ಯಾಯಬೆಲೆ ಅಂಗಡಿಗಳಿಗೆ ನೀಡಿದ್ದ ಪರವಾನಗಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ನ್ಯಾಯಬೆಲೆ ಅಂಗಡಿಗಳವರು ಅಕ್ರಮವಾಗಿ ಸೃಷ್ಟಿಸಿದ್ದ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿದ್ದು, ಈ ಕುರಿತು ಇಲಾಖೆ ಮಟ್ಟದಲ್ಲಿ ವಿಚಾರಣೆಗೆ ಜಿಲ್ಲಾಡಳಿತ ನಿರ್ಧರಿಸಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.