ರಾಯಚೂರು

ಪರಿಸರ ಸಂರಕ್ಷಣೆ ಬಗ್ಗೆ ಯುವಕರಿಗೆ ಸಲಹೆ

Published On :

ದೇವದುರ್ಗ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅವಶ್ಯ. ಈ ನಿಟ್ಟಿನಲ್ಲಿ ಅರಿವು ಮೂಡಿಸುವಂತಹ ಕಾರ್ಯ ಯುವಕರಿಂದಾಗಬೇಕಿದೆ ಎಂದು ದೇವದುರ್ಗ ಆರ್‌ಡಿಸಿಸಿ ಬ್ಯಾಂಕಿನ ನಿರ್ದೇಶಕ ಎ.ರಾಜಶೇಖರ ನಾಯಕ ಕರೆ ನೀಡಿದರು.
ಪಟ್ಟಣದ ಬಸವೇಶ್ವರ ಡಿಇಡಿ ಕಾಲೇಜಿನಿಂದ ಇತ್ತೀಚೆಗೆ ಆಯೋಜಿಸಿದ್ದ 2012- 13ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಬಸವರಾಜ ಬ್ಯಾಗವಾಟ್ ವಹಿಸಿದ್ದರು.
ಈ ಸಂದರ್ಭದಲ್ಲಿ ಅತಿಥಿಗಳಾಗಿ ಜಿಪಂ ಮಾಜಿ ಅಧ್ಯಕ್ಷ ರಾಮಣ್ಣ ಇರಬಗೇರಾ, ಕಾಂಗ್ರೆಸ್ ಪಕ್ಷದ ವಕ್ತಾರ ರಂಗಪ್ಪ ಗೋಸಲ್, ರಮಾನಂದ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಹುಸೇನಸಾಬ ನಿಲುವಂಜಿ, ಫಾರೂಕ್ ಅಹ್ಮದ್, ಚನ್ನವೀರಯ್ಯ ಸ್ವಾಮಿ ಅರಕೇರಾ, ಡಿಎಸ್ಸೆಸ್‌ನ ಹನುಂತಪ್ಪ ಕಾಕರಗಲ್, ಬೆಳ್ಳಿಯಪ್ಪ ಬಲ್ಲಿದವ್, ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಪ್ರಭಣ್ಣಗೌಡ, ಗುರುರಾಜ ವಿಶ್ವಕರ್ಮ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.