ಹಳೆ ವೈಷಮ್ಯ; ವ್ಯಕ್ತಿ ಕೊಲೆ
ರಾಯಚೂರು: ನಗರದ ಮಡ್ಡಿಪೇಟೆ ನಿವಾಸಿಯೊಬ್ಬರನ್ನು ಬುಧವಾರ ಬೆಳಗ್ಗೆ ತಾಲೂಕಿನ ಬಿಜನಗೇರಾ ಗ್ರಾಮದ ರಸ್ತೆಯಲ್ಲಿ ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಯಾದವನನ್ನು ನರಸಿಂಹಲು(37) ಎಂದು ಗುರುತಿಸಲಾಗಿದೆ. ಈತನನ್ನು ಹಳೆಯ ವೈಷಮ್ಯದಿಂದಲೇ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಬಿಜನಗೇರಾ ಗ್ರಾಮದಿಂದ ಈತ ನಗರಕ್ಕೆ ಆಗಮಿಸುತ್ತಿದ್ದ ವೇಳೆ ಮಾರ್ಗದಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಸ್ಪರ್ಶ; ಹತ್ತಿ, ಲಾರಿ ಭಸ್ಮ
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಹತ್ತಿ ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಗಬ್ಬೂರು ಗ್ರಾಮದಿಂದ ರಾಯಚೂರಿಗೆ ಹತ್ತಿಯನ್ನು ಸಾಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ್ದರಿಂದ ಬೆಂಕಿ ತಗುಲಿ 30 ಲಕ್ಷ ಮೌಲ್ಯದ ಹತ್ತಿ ಸುಟ್ಟು ಲಾರಿ ಸಹ ಭಸ್ಮವಾಗಿದೆ. ಈ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ನಿಂದ ಬಿದ್ದು ಮಹಿಳೆ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಗೊರೇಬಾಳ ಗ್ರಾಮದ ಬಳಿಯ ಅಂಬಾಮಠ ಕ್ರಾಸ್ ಹತ್ತಿರ ಬೈಕ್ನಿಂದ ಬಿದ್ದು ಮಹಿಳೆ ಮೃತಪಟ್ಟಿದ್ದಾಳೆ. ಮೃತಳನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಈಕೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಮಾರ್ಗದಲ್ಲಿ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದ್ದರಿಂದ ಕೆಳಗೆ ಬಿದ್ದ ಈಕೆಯ ತಲೆಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಆಕೆಯನ್ನು ಗಂಗಾವತಿ ತಾಲೂಕಿನ ಕಾರಟಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

