ರಾಯಚೂರು

ಐದಬಾವಿ ರಸ್ತೆ ಮಧ್ಯೆ ಗುಂಡಿ: ಸಂಚಾರಕ್ಕೆ ಅಡ್ಡಿ

Published On :

ಲಿಂಗಸ್ಗೂರು: ತಾಲೂಕಿನ ಗುರುಗುಂಟಾ ಗ್ರಾಮದಿಂದ ಐದಬಾವಿ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯದಲ್ಲಿ ಬೃಹತ್ ಗುಂಡಿ ನಿರ್ಮಾಣಗೊಂಡಿದೆ. ಇದರಿಂದ ವಾಹನ ಸವಾರರು ಮತ್ತು ಜನ-ಜಾನುವಾರುಗಳು ಆತಂಕದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಐದಬಾವಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಚರಕುಂಟಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಮೇಲೆ ಗುಂಡಿ ನಿರ್ಮಾಣಗೊಂಡಿದೆ. ಇದರಿಂದ ಗುರುಗುಂಟಾ ಮತ್ತು ಐದಬಾವಿ ಗ್ರಾಮ ಸೇರಿದಂತೆ ಇದರ ವ್ಯಾಪ್ತಿಯಲ್ಲಿ ಬರುವ ಕಾಟಗಲಲ್ದೊಡ್ಡಿ, ಕಲಾಳರದೊಡ್ಡಿ, ಅಂಬಿಗೇರದೊಡ್ಡಿಗಳ ಶಾಲಾ ಮಕ್ಕಳು ಹಾಗೂ ಅಲ್ಲಿನ ಜನತೆ ಪ್ರತಿನಿತ್ಯ ಇದೆ. ರಸ್ತೆಯಿಂದ ಸಂಚರಿಸುತ್ತಾರೆ ಹಾಗೂ ಸಾರಿಗೆ ಬಸ್‌ಗಳೂ ಇದೇ ಮಾರ್ಗವಾಗಿ ಸಂಚರಿಸುತ್ತವೆ.
ಪ್ರಸ್ತುತ ಮಳೆಗಾಲ ಆರಂಭಗೊಂಡಿದ್ದು, ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಸೇತುವೆ ಮೇಲೆ ನೀರು ಹರಿದ ಸಂದರ್ಭದಲ್ಲಿ ಗುಂಡಿ ನೀರಿನೊಳಕ್ಕೆ ಮುಳುಗಿದರೆ ವಾಹನ ಸವಾರರು ಮತ್ತು ಜನತೆ ಸೇತುವೆ ದಾಟುವ ಸಂದರ್ಭದಲ್ಲಿ ಅಥವಾ ಕತ್ತಲಲ್ಲಿ ಸಂಚರಿಸುವ ಸಂದರ್ಭದಲ್ಲಿ ಅಪಘಾತಕ್ಕೀಡಾಗುವ ಸಾಧ್ಯತೆ ಇರುತ್ತದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವರೇ ಎಂಬುದು ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.