ಇಂದು ಜಿಲ್ಲಾ 'ಲೋಕಾ' ಪ್ರವಾಸ
ರಾಯಚೂರು: ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಜೂ.15 ಮತ್ತು 17ರಂದು ಜಿಲ್ಲೆಯ ಲಿಂಗಸ್ಗೂರು ಮತ್ತು ದೇವದುರ್ಗ ಪಟ್ಟಣಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಯ ಅಹವಾಲು ಸ್ವೀಕರಿಸಲಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಲೋಕಾಯುಕ್ತರು, ಜೂ.15ರಂದು ಬೆಳಗ್ಗೆ 10ಕ್ಕೆ ಲಿಂಗಸ್ಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ. ಜೂ.17ರಂದು ಬೆಳಗ್ಗೆ 10ಕ್ಕೆ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು.
ನಾಳೆ ನೌಕರರ ಸಂಘದ ಸಭೆ
ರಾಯಚೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸಭೆಯನ್ನು ಜೂ.16ರಂದು ಕರೆಯಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಜಹಗೀರದಾರ್, ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ 2013-18ನೇ ಸಾಲಿನ ಚುನಾವಣೆ, ಹಿಂದಿನ ಸಭೆಯ ಗೊತ್ತುವಳಿ ದೃಢೀಕರಿಸುವುದು ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಕಾರಣ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.
ವೈದ್ಯನ ಆತ್ಮಹತ್ಯೆ
ರಾಯಚೂರು: ದೇವದುರ್ಗ ತಾಲೂಕಿನ ಜೀರಬಂಡಿ ಗ್ರಾಮದಲ್ಲಿ ಖಾಸಗಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ರಾಜಶೇಖರ್ ಎಂದು ಗುರುತಿಸಲಾಗಿದೆ. ಈತ ಹಣಕಾಸಿನ ವಿಷಯಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನಿಂದ ನಿರಂತರ ಬೆದರಿಕೆಯಿದ್ದ ಹಿನ್ನೆಲೆಯಲ್ಲಿ ಕಿರುಕುಳ ತಾಳದೇ ತನ್ನ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರಿಗೆ ದೂರಲಾಗಿದೆ. ದೇವದುರ್ಗ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

