ರಾಯಚೂರು

ಪೂರಕ ಪರೀಕ್ಷೆ; ನಾಳೆಯಿಂದ ನಿಷೇಧಾಜ್ಞೆ

Published On :

ರಾಯಚೂರು: ಜೂ.17ರಿಂದ 24ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
   ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಈ ಬಗ್ಗೆ ಆದೇಶ ಹೊರಡಿಸಿ ಜೂ.17ರಿಂದ 24ರವರೆಗೆ ಪರೀಕ್ಷೆಯಲ್ಲಿ ಅವ್ಯವಹಾರ ನಡೆಯುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳು ಮೊಬೈಲ್ ಫೋನಗಳು, ಪಠ್ಯ ಪುಸ್ತಕಗಳು ಹಾಗೂ ಕ್ಯಾಲ್ಕುಲೇಟರ್ ಗಳನ್ನು ತರದಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.