ಕೈಗಾರಿಕೆ; ಸೇವಾ ಘಟಕ ಸ್ಥಾಪನೆಗೆ ಕರೆ
ರಾಯಚೂರು: ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ(ಪಿಎಂಇಜಿಪಿ)ಯಡಿ 2013-14ನೇ ಸಾಲಿನ ಬ್ಯಾಂಕ್ಗಳ ಮೂಲಕ ಸಾಲ ಸೌಲಭ್ಯದೊಂದಿಗೆ ಕೈಗಾರಿಕೆ ಸೇವಾ ಘಟಕಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಢಿಢಿಢಿ.್ಞಢ್ಝ್ಛ.್ಟ್ಠ್ಜ.್ಝಟಿ ಅಥವಾ ಢಿಢಿಢಿ.ಠಟಜ್ಜಠ.್ಝಟಿ ಈ ವೆಬ್ಸೈಟ್ನಲ್ಲಿ ಪಡೆಯಬಹುದು. 18 ವರ್ಷ ವಯೋವಾನ ಮೀರಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈ ಮೊದಲು ಕೇಂದ್ರ, ರಾಜ್ಯ ಸರ್ಕಾರದ ಸಹಾಯಧನ ಹೊಂದಿದ ಯೋಜನೆಗಳಲ್ಲಿ ಪ್ರಯೋಜನ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಈ ಯೋಜನೆಯು ಕೇವಲ ಹೊಸ ಘಟಕಗಳ ಸ್ಥಾಪನೆಗೆ ಮಾತ್ರ ಅನ್ವಯವಾಗುತ್ತದೆ. ತಮ್ಮ ಯೋಜನಾ ವರದಿಯೊಂದಿಗೆ ಗುರುತಿನ ಚೀಟಿ, ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಫೋಟೋ, ಇತ್ಯಾದಿ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು, ಜಿಲ್ಲಾ ಅಧಿಕಾರಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ರಾಯಚೂರು, ಡೈರೆಕ್ಟರ್, ಖಾದಿ ಮತ್ತು ವಿಲೇಜ್ ಇಂಡಸ್ಟ್ರಿಸ್ ಕಮಿಷನ್ ಬೆಂಗಳೂರು, ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಜೂ.30ರೊಳಗೆ ಸಲ್ಲಿಸಬೇಕು ಎಂದು ಕೈಗಾರಿಕೆ ಇಲಾಖೆ ತಿಳಿಸಿದೆ.
22ರಂದು ಹಡಪದ ಅಪ್ಪಣ್ಣ ಪುಣ್ಯಸ್ಮರಣೆ
ಲಿಂಗಸ್ಗೂರು: ಬಸವಪ್ರಿಯ ಹಡಪದ ಅಪ್ಪಣ್ಣ ಮಹಾಸ್ವಾಮಿಗಳ 5ನೇ ಪುಣ್ಯಸ್ಮರಣೆ ಕಾರ್ಯಕ್ರಮ ತಂಗಡಗಿಯಲ್ಲಿ ಜೂ.22 ರಂದು ಜರುಗಲಿದ್ದು, ಸಮಾಜ ಬಾಂಧವರು ಭಾಗವಹಿಸಬೇಕೆಂದು ಹಡಪದ ಅಪ್ಪಣ್ಣ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಸರ್ಜಾಪುರ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ. ರಾಯಚೂರಿನಲ್ಲಿ ಇತ್ತೀಚೆಗೆ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವೀರಭದ್ರಪ್ಪ ಕಲ್ಮಲಾ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಸಭೆಯಲ್ಲಿ ಸಂಘದ ತಾಲೂಕ ಅಧ್ಯಕ್ಷ ಜಂಬಣ್ಮ ಕರಡಕಲ್, ಉಪಾಧ್ಯಕ್ಷ ಬಸಣ್ಣ ಸರ್ಜಾಪುರ, ಮಾನವಿ ತಾಲೂಕ ಅಧ್ಯಕ್ಷ ಸಂಗಪ್ಪ ಪಾಮನಕಲ್ಲೂರ, ಸಿಂಧನೂರು ತಾಲೂಕು ಅಧ್ಯಕ್ಷ ಶಂಕರಪ್ಪ ಕರಡೋಣಿ, ದೇವದುರ್ಗ ತಾಲೂಕು ಸಂಘಟನಾ ಕಾರ್ಯದರ್ಶಿ ಗೂಳಪ್ಪ ಅರಕೇರಾ ಸೇರಿದಂತೆ ಸಮಾಜ ನೂರಾರು ಜನರು ಭಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.
20ರಂದು ಯೋಜನಾ
ಸಮಿತಿ ಸಭೆ
ರಾಯಚೂರು: ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ಜೂ.20ರಂದು ಕರೆಯಲಾಗಿದೆ. ಅಂದು ಬೆಳಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ಲಲಿತಮ್ಮ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಜಿಪಂ ಸಿಇಒ ಕಚೇರಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

