ಪದವಿ ವಿದ್ಯಾರ್ಥಿಗಳ ವರ್ಗಾವಣೆ ನಿರ್ಧಾರಕ್ಕೆ ಎಐಡಿಎಸ್ಒ ವಿರೋಧ
ರಾಯಚೂರು: ವಿವಿಧ ಪದವಿ ಕೋರ್ಸುಗಳ ಐಚ್ಛಿಕ ವಿಷಯಗಳಿಗೆ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಅಂಥ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ವರ್ಗಾಯಿಸುವ ಸರ್ಕಾರದ ನಿರ್ಧಾರವನ್ನು ಎಐಡಿಎಸ್ ಒ ಸಂಘಟನೆ ವಿರೋಧಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಅಧ್ಯಕ್ಷ ಮಹೇಶ್ ಚೀಕಲಪರ್ವಿ, ಸರ್ಕಾರದ ಇಂಥ ನಿರ್ಧಾರವು ಪದವಿ ಶಿಕ್ಷಣದ ಖಾಸಗೀಕರಣಕ್ಕೆ ದಾರಿ ಮಾಡಿಕೊಡುವ ಹುನ್ನಾರವಾಗಿದೆ. ಕೂಡಲೇ ಸರ್ಕಾರ ತನ್ನ ನಿರ್ಧಾರ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆ, ಶಿಕ್ಷಕರ ಹಾಗೂ ಮೂಲ ಸೌಲಭ್ಯಗಳ ಕೊರತೆಯ ಕಾರಣಗಳನ್ನು ಅರಿತು ಸರ್ಕಾರ ಚರ್ಚೆ ಮುಖಾಂತರ ಪರಿಹಾರ ಕಂಡುಕೊಳ್ಳಬೇಕಿದೆ. ಅದನ್ನು ಮಾಡದ ಸರ್ಕಾರ ಬೇರೆ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕಳಿಸುವುದು ಖಾಸಗೀಕರಣದ ಪರವಾದ ನಿಲುವು ಸ್ಪಷ್ಟಪಡಿಸಿದೆ ಎಂದು ದೂರಿದ್ದಾರೆ.
ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಮುಚ್ಚುವ ಹುನ್ನಾರ ಸರ್ಕಾರ ನಡೆಸಿದೆ. ಅದರ ಭಾಗವಾಗಿ ಇಂಥ ನಿರ್ಧಾರ ಕೈಗೊಂಡಿದೆ. ಸರ್ಕಾರದ ಇಂಥ ನೀತಿಗಳಿಂದ ಬಡ ಮತ್ತು ಮಧ್ಯಮ ವರ್ಗದವರು ಉನ್ನತ ಶಿಕ್ಷಣದಿಂದ ವಂಚಿತರಾಗಲಿದ್ದಾರೆಂದು ಆರೋಪಿಸಿದ್ದಾರೆ.
ಸರ್ಕಾರ ಕೂಡಲೇ ಖಾಸಗೀಕರಣದ ನೀತಿ ಕೈಬಿಟ್ಟು ಸದ್ಯ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿಗೆ ಅಗತ್ಯ ಸಂಖ್ಯೆಯ ಉಪನ್ಯಾಸಕರು, ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

