ರಾಯಚೂರು

ಮಹಿಳೆಗೆ ಗೌರವ ನೀಡಿ: ನ್ಯಾ. ಮಟ್ಟೂರು

Published On :

ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.16
ಸಮಾಜದಲ್ಲಿ ಮಹಿಳೆಯರಿಗೆ ವಿಶೇಷವಾದ ಸ್ಥಾನಮಾನವಿದೆ. ಅವರನ್ನು ನಿರ್ಲಕ್ಷಿಸಿದರೆ ಕುಟುಂಬವೇ ನೆಮ್ಮದಿ ಕಳೆದುಕೊಳ್ಳುತ್ತದೆ. ಗೌರವಿಸಿದರೆ ಎಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಕುಟುಂಬ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಡಿ.ಎಸ್.ಮಟ್ಟೂರು ಅಭಿಪ್ರಾಯಪಟ್ಟರು.
ಕನಕದಾಸ ವಸತಿ ನಿಲಯದಲ್ಲಿ ಕಾನೂನು ಸಾಕ್ಷರತಾ ರಥಾ, ಸಂಚಾರಿ ನ್ಯಾಯಾಲಯ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ಹೊಡೆಬಡಿಗೆ ಶಿಕ್ಷೆ ನಿಶ್ಚಿತ: ಮಹಿಳೆಯರ ಪರವಾಗಿ ಅನೇಕ ಕಾನೂನುಗಳು ಬಂದಿವೆ. ಅವರಿಗೆ ಹೊಡೆಬಡೆ ಮಾಡಿದರೆ ಶಿಕ್ಷೆ ನಿಶ್ಚಿತ. ಗ್ರಾಮೀಣ ಪ್ರದೇಶದ ಮಹಿಳೆಯರು ಶಿಕ್ಷಣಕ್ಕೆ ಆದ್ಯತೆ ಹೊಂದಬೇಕು. ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳು ಸಾಮಾನ್ಯ ಕಾನೂನುಗಳ ಬಗ್ಗೆ ಮಾಹಿತಿ ಪಡೆದುಕೊಂಡಿರಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಭಾರತಿ ಎಸ್.ರಾಯಣ್ಣವರ ಮಾತನಾಡಿ, ಕಳೆದ ಮೂರು ದಿನಗಳಿಂದ ತಾಲೂಕ ನ್ಯಾಯವಾದಿಗಳ ಸಂಘ, ಕಾನೂನು ಸೇವಾ ಸಮಿತಿ ಸೇರಿದಂತೆ ಸರ್ಕಾರಿ ಇಲಾಖೆಗಳು ತಮ್ಮ ಕಾನೂನು ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡಿವೆ. ವಿಶೇಷವಾಗಿ ಕನಕದಾಸ ವಸತಿ ನಿಲಯದವರು ಕೊನೆ ಘಳಿಗೆಯಲ್ಲಿ ಕಾರ್ಯಕ್ರಮದಲ್ಲಿ ಮಾರ್ಪಟಾದರೂ ಸಕಲ ವ್ಯವಸ್ಥೆ ಮಾಡಿದ್ದಾರೆ. ನಿಜಕ್ಕೂ ಅವರು ಅಭಿನಂದನಾ ಅರ್ಹರು ಎಂದರು.
ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಚ್. ವೀರಭದ್ರಪ್ಪ ವಕೀಲರು ಮಹಿಳೆಯರ ಹಕ್ಕು ಬಾಧ್ಯತೆಗಳ ಕುರಿತು, ಶರಣಬಸವ ಗದ್ರಟಗಿ ಜನನ, ಮರಣ ನೊಂದಣಿ ಕಾಯಿದೆ ಕುರಿತು ಅನೇಕ ಉದಾಹರಣೆಗಳೊಂದಿಗೆ ಉಪನ್ಯಾಸ ಮಂಡಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರು, ಉರುಕುಂದಪ್ಪ ವಕೀಲರು, ನಾರಾಯಣಸ್ವಾಮಿ ಇನ್ನಿತರರು ಇದ್ದರು. ಕೊನೆಯಲ್ಲಿ ಜಿಲ್ಲಾ ನ್ಯಾಯಾಧೀಶ ಸಾಕ್ಷರತಾ ರಥವನ್ನು ಕೊಪ್ಪಳ ಜಿಲ್ಲೆಗೆ ಬೀಳ್ಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.