ಮಾಸಾಶನ; ಸಚಿವರಿಗೆ ವೃದ್ಧರಿಂದ ಮನವಿ
ಕನ್ನಡಪ್ರಭ ವಾರ್ತೆ , ಲಿಂಗಸ್ಗೂರು , ಜೂ.17
ಸರ್ಕಾರದಿಂದ ದೊರೆಯುವ ಮಾಸಾಶನ ಕಳೆದ ಒಂದು ವರ್ಷದಿಂದ ಸ್ಥಗಿತಗೊಳಿಸಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ವಯೋವೃದ್ಧರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್.ಕೆ.ಪಾಟೀಲರಿಗೆ ಮನವಿ ಮಾಡಿದರು.
ಸಚಿವರು ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿದ ವಯೋವೃದ್ಧರು, ತಾಲೂಕಿನಲ್ಲಿ ಅಂಗವಿಕಲ ವೇತನ, ವಿಧವಾ ವೇತನ, ವೃದ್ಧಾಪ್ಯವೇತನ ಸೇರಿದಂತೆ ಇತರೆ ಮಾಸಾಶನ ಕಳೆದ ಒಂದು ವರ್ಷದಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗಿದೆ. ಈ ಕುರಿತು ತಹಸೀಲ್ದಾರರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲವೆಂದು ಆರೋಪಿಸಿದರು.
ವಯೋವೃದ್ಧರ ಮನವಿ ಆಲಿಸಿದ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿಗೆ ಸಮಸ್ಯೆ ಕುರಿತು ವಿಚಾರಿಸಿದರು. ಇದಕ್ಕೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ ಅವರು ತಹಸೀಲ್ದಾರರನ್ನು ಕರೆದು ಮಾಸಾಶನ ಸ್ಥಗಿತಗೊಳಿಸಿದ ಕುರಿತು ಕಾರಣ ತಿಳಿಸುವಂತೆ ಸೂಚಿಸಿದರು. ತಹಸೀಲ್ದಾರ್ ಎನ್.ಬಿ. ಪಾಟೀಲರಿಂದ ಸಮರ್ಪಕವಾಗಿ ಉತ್ತರ ದೊರೆಯದ ಪ್ರಯುಕ್ತ ಜೂ.25 ರೊಳಗೆ ತಾಲೂಕಿನಲ್ಲಿ ಮಾಸಾಶನದಿಂದ ವಂಚಿತಗೊಂಡ ನಿಜವಾದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲತ್ತು ಒದಗಿಸಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಆದೇಶ ನೀಡಲಾಗುವುದೆಂದು ಸಚಿವ ಎಚ್.ಕೆ. ಪಾಟೀಲ್ ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

