ರಾಯಚೂರು

ಆರ್ಸೆನಿಕ್‌ಯುಕ್ತ ನೀರು; ವಾಸ್ತವ ಸ್ಥಿತಿ ಪರಿಶೀಲನೆ

Published On :

ರಾಯಚೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಅವರು ಸೋಮವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಆರ್ಸೆನಿಕ್ ಯುಕ್ತ ನೀರಿನ ಸೇವನೆಯಿಂದಾಗಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಗದಗನಿಂದ ಅವರು ಮಾನವಿ ತಾಲೂಕಿನ ಪಾಮನಕಲ್ಲೂರು ಗ್ರಾಮಕ್ಕೆ ಮಧ್ಯಾಹ್ನ ಆಗಮಿಸಿ ಗ್ರಾಮಸ್ಥರ ಸಭೆ ನಡೆಸಿ ಆರ್ಸೆನಿಕ್ ಯುಕ್ತ ನೀರಿನ ಸೇವನೆಯಿಂದಾಗಿರುವ ಆರೋಗ್ಯ ಸಂಬಂಧಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು. ಅದೇ ರೀತಿ ಶಾಸಕರು ಈ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದರು.
ನಂತರ ಅವರು ದೇವದುರ್ಗ ತಾಲೂಕಿನ ವಂದಲಿ, ಪಲಕನಮರಡಿ ಹಾಗೂ ಗಬ್ಬೂರು ಗ್ರಾಮಗಳಿಗೆ ತೆರಳಿ ಅಲ್ಲಿನ ಜನರೊಂದಿಗೂ ಸಮಾಲೋಚನೆ ನಡೆಸಿ ಗ್ರಾಪಂ.ಗಳ ಸದಸ್ಯರು ಹಾಗೂ ಜನತೆಯನ್ನು ಭೇಟಿ ಮಾಡಿ ಆರ್ಸೆನಿಕ್ ಯುಕ್ತ ನೀರಿನ ಸೇವನೆ ಉಂಟು ಮಾಡಿರುವ ಸಮಸ್ಯೆಗಳ ಬಗ್ಗೆ ವಾಸ್ತವ ಸ್ಥಿತಿ ಪರಿಶೀಲಿಸಿದರು.
ಅದೇ ವೇಳೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮತ್ತು ಕಾಮಗಾರಿಗಳ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದರು. ಈ ವೇಳೆ ದೇವದುರ್ಗ ಶಾಸಕ ವೆಂಕಟೇಶ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಚಿವರೊಂದಿಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.