ರಾಯಚೂರು

ಸರ್ಕಾರಿ ಆಸ್ಪತ್ರೆ ವೈದ್ಯರ ಗೈರು; ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ ,   ರಾಯಚೂರು ,   ಜೂ.18
ಮಾನವಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೋಮವಾರ ವೈದ್ಯರು ಸೇವೆಗೆ ಗೈರು ಹಾಜರಾಗಿದ್ದನ್ನು ಖಂಡಿಸಿ ರೋಗಿಗಳು ಮತ್ತು ಅವರ ಸಂಬಂಧಿಕರು ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಆಸ್ಪತ್ರೆಯಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇದ್ದು, ನೇಮಕಗೊಂಡಿರುವ ವೈದ್ಯರೂ ಗೈರು ಹಾಜರಾದರೆ ರೋಗಿಗಳಿಗೆ ಚಿಕಿತ್ಸೆ ದೊರೆಯುವುದಾದರೂ ಹೇಗೆ ಎಂದು ಪ್ರಶ್ನಿಸಿದ ಪ್ರತಿಭಟನಾನಿರತರು ಆಸ್ಪತ್ರೆಯ ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಆಸ್ಪತ್ರೆ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿದೆ. ಸಿಬ್ಬಂದಿ ಸಮರ್ಪಕ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮೇಲಧಿಕಾರಿಗಳಿಗೆ ಗೊತ್ತಿದ್ದೂ ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿಎಸ್‌ಐ ದೀಪಕ್ ಭೂಸರೆಡ್ಡಿ ಮುಖ್ಯ ವೈದ್ಯರ ಜತೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ತಾಲೂಕಿಗೆ ಸಚಿವರು ಬಂದ ಹಿನ್ನೆಲೆಯಲ್ಲಿ ಅವರ ಜತೆಗಿರುವುದಾಗಿ ತಿಳಿಸಿ ಬೇರೆಯ ವೈದ್ಯರನ್ನು ಆಸ್ಪತ್ರೆಗೆ ಕಳಿಸಿದರು.
ಈ ಸಂದರ್ಭದಲ್ಲಿ ದಲಿತ ಯುವಸೇನೆ ಅಧ್ಯಕ್ಷ ರವಿಕುಮಾರ, ಕೋಳಗೇರಿ ನಿವಾಸಿಗಳ ಸಂಘದ ಅಧ್ಯಕ್ಷ ಚಿದಾನಂದ, ಉರುಕುಂದ, ವೆಂಕಟೇಶ, ಶಿವರಾಜ, ನರಸಿಂಹ ಪುತ್ರಕುಮಾರ ಹಾಗೂ ರಾಜ್ಯ ಯುವ ಮಿತ್ರ ಯುವ ಸೇನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.