ರಾಯಚೂರು

ಇಂದು ಧರಣಿ

Published On :

ರಾಯಚೂರು: ಭೂಮಿಯ ವರ್ಗಾವಣೆ ದಾಖಲೆಗಳು, ಪಡಿತರ ಚೀಟಿ ವಿತರಣೆ ವಿಳಂಬ, ವಿಧವಾ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂ. 20ರಂದು ತಹಸೀಲ್ದಾರ್ ಕಚೇರಿ ಎದುರು ರಾಜ್ಯ ರೈತ ಸಂಘದಿಂದ ಧರಣಿ ಆಯೋಜಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘದ ತಾಲೂಕಾಧ್ಯಕ್ಷ ನರಸಿಂಗರಾವ್ ಕುಲಕರ್ಣಿ ಮತ್ತು ಪ್ರಧಾನ ಕಾರ್ಯದರ್ಶಿ ಜಯಪ್ಪಸ್ವಾಮಿ ಉಡಮಗಲ್ ಅವರು, ತಾಲೂಕು ಆಡಳಿತ ಅಗತ್ಯ ದಾಖಲೆಗಳನ್ನು ವಿತರಿಸುವಲ್ಲಿ ವಿಳಂಬ ಮಾಡುತ್ತಿದ್ದು ಅದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಚೆಕ್ ವಿತರಣೆ
ಸಿಂಧನೂರು: ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್‌ನ ಕೆಂಗಲ್ ಗ್ರಾಮ ಘಟಕದ ಕಾರ್ಯದರ್ಶಿ ಕರಿಲಿಂಗಪ್ಪ ಹೃದಯಾಘಾತದಿಂದ ನಿಧನರಾಗಿದ್ದಕ್ಕೆ ಗ್ರಾಮ ಘಟಕದ ವತಿಯಿಂದ 30 ಸಾವಿರ ಮೌಲ್ಯದ ಚೆಕ್‌ನ್ನು ಫೆಡರೇಷನ್‌ನ ರಾಜ್ಯ ಉಪಾಧ್ಯಕ್ಷ ತಿಪ್ಪಯ್ಯ ಅವರು ಕುಟುಂಬದ ಸದಸ್ಯರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಅಗಲಿದ ಕಾರ್ಮಿಕ ಮುಖಂಡನಿಗೆ ಫೆಡರೇಷನ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಧ್ಯಕ್ಷತೆಯನ್ನು ತಾಲೂಕು ಸಮಿತಿ ಅಧ್ಯಕ್ಷ ನರಸಿಂಹಪ್ಪ ವಹಿಸಿದ್ದರು. ಸಭೆಯಲ್ಲಿ ಮುಖಂಡರಾದ ಹುಸೇನಪ್ಪ, ಮಾರೆಪ್ಪ, ದೊಡ್ಡಹುಸೇನ ಬಾಷಾ, ಈರಪ್ಪ ನಾಯಕ, ಮಾರೆಪ್ಪ ಸುಣ್ಣದಕಲ್, ಪಾರ್ವತಮ್ಮ, ಹೊನ್ನೂರಮ್ಮ, ದುರುಗಮ್ಮ ಇದ್ದರು. ಜಿಲ್ಲಾ ಸಮಿತಿ ಅಧ್ಯಕ್ಷ ವೆಂಕಪ್ಪ ಕೆಂಗಲ್ ನಿರೂಪಿಸಿದರು. ವಿರುಪಣ್ಣ ವಂದಿಸಿದರು.
ತರಬೇತಿಗೆ ಅರ್ಜಿ
ದೇವದುರ್ಗ: ಪ್ರಸಕ್ತ ಹೊಲಿಗೆ ತರಬೇತಿ ಕೇಂದ್ರ ದೇವದುರ್ಗದಲ್ಲಿ ತರಬೇತಿಗೆ ಆಸಕ್ತಿ ಮಹಿಳೆಯರಿಂದ ಅರ್ಜಿ ಕರೆಯಲಾಗಿದೆ. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಪ್ರಕಟಣೆ ನೀಡಿದ್ದು, ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಜು.1ರೊಳಗೆ ಸಲ್ಲಿಸಲು ಕೋರಲಾಗಿದೆ. ಅರ್ಜಿಗಳನ್ನು ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೇವದುರ್ಗ ಇಲ್ಲಿಗೆ ಸಲ್ಲಿಸಲು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.