ನವೋದಯ ಶೈಕ್ಷಣಿಕ ಟ್ರಸ್ಟ್ಗೆ ಭೂಮಿ: ಅರ್ಜಿ ವಜಾ
ಬೆಂಗಳೂರು: ರಾಯಚೂರಿನ ನವೋದಯ ಶೈಕ್ಷಣಿಕ ಟ್ರಸ್ಟ್ಗೆ ನೀಡಿರುವ ಭೂಮಿ ಹಿಂಪಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ಕಾನೂನು ಪ್ರಕಾರ ಶಾಲೆಗೆ ನೀಡಿರುವ ಭೂಮಿಯ ಕುರಿತಂತೆ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
ಟ್ರಸ್ಟ್ಗೆ ಅಕ್ರಮವಾಗಿ 49.28 ಎಕರೆ ಭೂಮಿಯನ್ನು ನೀಡಲಾಗಿದೆ. ಸರ್ಕಾರದ ನಿಯಮಗಳನ್ನು ಮೀರಿ ಶಾಲೆಯ ಆಡಳಿತ ಮಂಡಳಿ ಕಟ್ಟಡ ನಿರ್ಮಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದ್ದು, ಅಕ್ರಮವು ತನಿಖಾ ವರದಿಯಲ್ಲಿ ಸಾಬೀತಾಗಿದೆ ಎಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ತನಿಖಾ ವರದಿ ಆಧರಿಸಿ ಈಗಾಗಲೇ ನಗರ ಸಭೆಯ ಆಯುಕ್ತರನ್ನು ವಜಾಗೊಳಿಸಲಾಗಿದೆ. ಮತ್ತೊಂದೆಡೆ ಅಕ್ರಮ ಕಟ್ಟಡಗಳ ತೆರವು ಹಾಗೂ ಭೂಮಿಗೆ ಸಂಬಂಧಿಸಿ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರಿ ವಕೀಲರು ಕೋರ್ಟ್ಗೆ ತಿಳಿಸಿದರು.
ಅಕ್ರಮ ತೆರವು ಪ್ರಕ್ರಿಯೆಗೆ ಸಂಬಂಧಿಸಿ ಅರ್ಜಿದಾರರು ಮಾಹಿತಿ ಪಡೆದು, ಮತ್ತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.
ಅಮರಾಪುರ; ಪರಿಸರ ದಿನಾಚರಣೆ
ಸಿಂಧನೂರು: ತಾಲೂಕಿನ ಅಮರಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ವೃಷಭೇಂದ್ರಯ್ಯ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಮಾತನಾಡಿ, ಜಾಗತಿಕ ತಾಪಮಾನ ಸರಿದೂಗಿಸಲು ಅರಣ್ಯಗಳನ್ನು ರಕ್ಷಿಸುವುದು, ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರಾಣಿ ಪಕ್ಷಿಗಳಿಗೆ ಅರಣ್ಯವೇ ಆಶ್ರಯ ಸ್ಥಾನವಾಗಿದೆ. ಅವುಗಳಿಲ್ಲದಿದ್ದರೆ ಪ್ರಾಣಿ, ಪಕ್ಷಿ ಸಂಕುಲ ತೀವ್ರ ತೊಂದರೆ ಅನುಭವಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಎಸ್ಡಿಎಂಸಿ ಅಧ್ಯಕ್ಷ ಎನ್.ತಿಪ್ಪಣ್ಣ, ಮುಖ್ಯಗುರು ಮಾವರೆಪ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಕರಾದ ನಾಗರಾಜ, ಸೈಯದ್ ಅಬ್ದುಲ್, ಮೌನೇಶ, ವೀರೇಶ, ಶಿವನಗೌಡ, ಚಂದ್ರಶೇಖರಯ್ಯ, ವಿನೋದಾ, ಲತಾ, ಶಾಂತಾ ಸೇರಿದಂತೆ ಎಸ್ಡಿಎಂಸಿ ಸದಸ್ಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

