ರಾಯಚೂರು

ಸ್ವಚ್ಛತೆ ಅಭಿಯಾನ ಮುಂದುವರಿಕೆ; ಅಂಗಡಿ ಮಾಲೀಕರಿಗೆ ಡಿಸಿ ಎಚ್ಚರಿಕೆ

Published On :

ರಾಯಚೂರು: ನಗರದಲ್ಲಿ ಸ್ವಚ್ಛತಾ ಅಭಿಯಾನವನ್ನು ಮುಂದುವರಿಸಿರುವ ಜಿಲ್ಲಾಡಳಿತವು, ನಗರದ ತೀನ್ ಕಂದೀಲ್ ಮತ್ತಿತರೆಡೆ ಬುಧವಾರ ಪಾದಚಾರಿ ರಸ್ತೆ ಅತಿಕ್ರಮಿಸಿ ವ್ಯಾಪಾರ ವಹಿವಾಟು ನಡೆಸಿದ್ದ ಅಂಗಡಿಗಳ ಮಾಲೀಕರಿಗೆ ಚುರುಕು ಮುಟ್ಟಿಸಿತು.
ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು ನಗರದ ಸೂಪರ್ ಮಾರ್ಕೆಟ್, ತೀನ್ ಕಂದೀಲ್ ಮತ್ತಿತರೆ ಮಾರುಕಟ್ಟೆ ಪ್ರದೇಶದಲ್ಲಿ ಸಂಚರಿಸಿ ಅಂಗಡಿಗಳ ಮಾಲೀಕರು ಪಾದಚಾರಿ ರಸ್ತೆ ಅತಿಕ್ರಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸಿದ್ದನ್ನು ಕಂಡು ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಚರಂಡಿಯಲ್ಲಿ ಕೆಲವರು ಕಸ ಹಾಕಿದ್ದಕ್ಕೆ ಬೇಸರಗೊಂಡು ಕಸವನ್ನು ಪುನಾ ಅಂಗಡಿಗಳೊಳಗೆ ಚೆಲ್ಲುವ ಮೂಲಕ ಬಿಸಿ ಮುಟ್ಟಿಸಿದರು. ಅದೇ ರೀತಿ ಕಸವನ್ನು ಚರಂಡಿಗೆ ಸುರಿಯದಂತೆ ಎಚ್ಚರಿಕೆ ನೀಡಿ ಅವರು ಫುಟ್‌ಪಾತ್ ಬಳಕೆ ಮಾಡಿ ವಹಿವಾಟು ನಡೆಸಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ಈ ವೇಳೆ ನಗರಸಭೆಯ ಪೌರಾಯುಕ್ತ ಮಂಜುನಾಥ್ ಸೇರಿದಂತೆ ಅನೇಕ ಸಿಬ್ಬಂದಿಯಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.