ರಾಯಚೂರು

ಕಳವು; ಕ್ರಿಮಿನಲ್ ಕೇಸ್

Published On :

ರಾಯಚೂರು: ನಗರದಲ್ಲಿ ವಿದ್ಯುತ್ ಕಳವು ಮಾಡುತ್ತಿದ್ದ 138 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜೆಸ್ಕಾಂ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜೆಸ್ಕಾಂ, ಜೆಸ್ಕಾಂ ಅಧೀಕ್ಷಕ ಅಭಿಯಂತರ ಜಿ.ಚಂದ್ರನಾಯರ್, ಜಾಗೃತ ದಳದ ಎಸ್ಪಿ ಪಾಪಯ್ಯ ನೇತೃತ್ವದಲ್ಲಿ ನಡೆದ ದಾಳಿಯ ವೇಳೆ ವಿದ್ಯುತ್ ಕಳವಿನ ಪ್ರಕರಣಗಳು ಪತ್ತೆಯಾಗಿದ್ದು 134 ಪ್ರಕರಣ ದಾಖಲಿಸಿ 14 ಲಕ್ಷ ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ. ವಿದ್ಯುತ್ ಕಳವು ವಿರೋಧಿ ಕಾನೂನಿನಡಿ ವಿದ್ಯುತ್ ಕಳವು ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗಿದ್ದು,ಅಸ್ಕಿಹಾಳ, ಹೊಸೂರು ಪ್ರದೇಶದಲ್ಲಿ 33 ಹಾಗೂ ಹರಿಜನವಾಡಾದಲ್ಲಿ 105 ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದೆ.
ಡಿಕ್ಕಿ: ಒಬ್ಬನ ಸಾವು
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರಲ್ಲಿ ಟ್ರ್ಯಾಕ್ಟರ್ ಟಿಲ್ಲರ್‌ಗೆ ಬೈಕ್ ಡಿಕ್ಕಿಯಾಗಿ ಅದರ ಸವಾರ ಮೃತಪಟ್ಟಿದ್ದಾನೆ. ಮೃತನನ್ನು ಹುಸೇನಪ್ಪ ಎಂದು ಗುರುತಿಸಲಾಗಿದೆ. ಈತ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ರಸ್ತೆಯಲ್ಲಿ ಟ್ರ್ಯಾಕ್ಟರ್ ಟಿಲ್ಲರ್ ನಿಲ್ಲಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಅದಕ್ಕೆ ಡಿಕ್ಕಿಯಾಗಿದ್ದರಿಂದ ಆತ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಹಿಂದಕ್ಕೆ ನೇಮಕ
ರಾಯಚೂರು: ಅಲ್ಪಸಂಖ್ಯಾತರ, ಹಿಂದುಳಿದವರ ಮತ್ತು ದಲಿತರ ಒಕ್ಕೂಟದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮೆಹರುನ್ನೀಸಾ ಬೇಗಂ ಅವರನ್ನು ನೇಮಿಸಲಾಗಿದೆ. ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ರಾಮಚಂದ್ರ ರೆಡ್ಡಿ ಈ ಕುರಿತು ಪ್ರಕಟಣೆ ನೀಡಿದ್ದು, ಕೂಡಲೇ ಬೇಗಂ ಅವರು ಕಾರ್ಯಪ್ರವೃತ್ತರಾಗಿ ಸಂಘಟನೆಯನ್ನು ಬಲಪಡಿಸಲು ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.