ಬಾಲಕಿ ಅತ್ಯಾಚಾರ ಯತ್ನ: ಕಠಿಣ ಶಿಕ್ಷೆಗೆ ಒತ್ತಾಯ
ಸಿಂಧನೂರು: ನಗರದ ಮಹೆಬೂಬ ಕಾಲೋನಿಯ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬ್ಯಾಂಕ್ ಅಧಿಕಾರಿ ಓಬಣ್ಣನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ರಾಷ್ಟ್ರೀಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಎಂ.ಸಿ. ಸೀತಮ್ಮ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬ್ಯಾಂಕ್ ಉದ್ಯೋಗಿಯಾಗಿರುವ ಓಬಣ್ಣ ಇಂತಹ ನೀಚ ಕೆಲಸಕ್ಕೆ ಹೋಗಬಾರದಾಗಿತ್ತು. ಈ ಘಟನೆ ಪೈಶಾಚಿಕ ಕೃತ್ಯವಾಗಿದೆ. ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಓಬಣ್ಣನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಾಸ್ಟೆಲ್ ಪ್ರವೇಶಕ್ಕೆ ಆಹ್ವಾನ
ದೇವದುರ್ಗ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಹರಿಂದ ಅರ್ಜಿ ಕರೆಯಲಾಗಿದೆ. ಈ ಕುರಿತು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ನೀಡಿದ್ದು, ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ದೇವದುರ್ಗ, ಜಾಲಹಳ್ಳಿ ಮತ್ತು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮತ್ತು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ದೇವದುರ್ಗ, ಅರಕೇರಾದಲ್ಲಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜು.7ರೊಳಗೆ ಅರ್ಜಿಗಳನ್ನು ಎಲ್ಲ ದಾಖಲೆಗಳೊಂದಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ವಸತಿ ನಿಲಯ ಪ್ರವೇಶಕ್ಕೆ ಕರೆ
ರಾಯಚೂರು: ಮಾನವಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮಾನವಿ ಪಟ್ಟಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಡಾ. ಅಂಬೇಡ್ಕರ್ ಪದವಿ ಬಾಲಕರ ವಸತಿ ನಿಲಯ, ಪಿಯುಸಿ ಬಾಲಕರ ವಸತಿ ನಿಲಯ, ಕಾಲೇಜು ಬಾಲಕಿಯರ ವಸತಿ ನಿಲಯ, ಸರ್ಕಾರಿ ಕಾಲೇಜು ಎಸ್ಟಿ ಬಾಲಕರ ವಸತಿ ನಿಲಯ ಮಾನವಿ ಈ ವಸತಿ ನಿಲಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

