ಹಳ್ಳಿಗಳಲ್ಲಿ ಮದ್ಯ ಮಾರಾಟ; ವಿರೋಧ
ಕನ್ನಡಪ್ರಭ ವಾರ್ತೆ, ರಾಯಚೂರು, ಜೂ.19
ಹಳ್ಳಿಗಳಲ್ಲಿ ಮದ್ಯ ಮಾರಾಟ ನಿಷೇಧಿಸುವ ಮೂಲಕ ಬಡ ಕುಟುಂಬಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ನವಜೀವನ ಮಹಿಳಾ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಉದ್ಯಾನವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಸಮಾಜದ ಉದ್ಧಾರಕ್ಕಾಗಿಯಾದರೂ ಮದ್ಯ ಮಾರಾಟ ನಿಲ್ಲಿಸಬೇಕು. ಮಹಾತ ಗಾಂಧೀಜಿ ಸಹ ಮದ್ಯ ಮಾರಾಟದ ವಿರೋಧಿಯಾಗಿದ್ದರು ಎಂಬುದನ್ನು ಸರ್ಕಾರಗಳು ಮರೆತಿವೆ ಎಂದು ದೂರಿದರು.
ಮಹಿಳೆಯರ ದೌರ್ಜನ್ಯ ಹಚ್ಚಳ: ಗ್ರಾಮೀಣ ಪ್ರದೇಶದಲ್ಲಿ ದಿನವೂ ದುಡಿಯುವ ವರ್ಗದ ಕುಟುಂಬಗಳ ನೆಮ್ಮದಿ ಮದ್ಯದ ಸೇವನೆಯಂಥ ಅನಿಷ್ಟ ಪಿಡುಗಿನಿಂದಾಗಿ ಹಾಳಾಗಿದೆ. ಬಡ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿವೆ. ಮದ್ಯ ಸೇವನೆಯಿಂದಾಗಿ ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ಕುಟುಂಬದ ನಿರ್ವಹಣೆಯೇ ಕಷ್ಟವಾಗಿರುವಾಗ ಗ್ರಾಮೀಣ ಭಾಗದಲ್ಲಿಯೂ ಹೆಚ್ಚುತ್ತಿರುವ ಮದ್ಯದ ಮಾರಾಟವು ಬಡವರಿಗೆ ಶಾಪವಾಗಿ ಪರಿಣಮಿಸುತ್ತಿದೆ. ಮದ್ಯ ಸೇವನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ದೂರಿದರು.
ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಈ ಹಿನ್ನೆಲೆಯಲ್ಲಿ ಕುಟುಂಬದ ಎಲ್ಲರೂ ನೆಮ್ಮದಿಯಿಂದ ಬದುಕು ನಡೆಸುವಂತಾಗಲು ಹಾಗೂ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ತಡೆಗೆ ರಾಜ್ಯ ಸರ್ಕಾರ ಕೂಡಲೇ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಹಳ್ಳಿಗರ ಬದುಕಿಗೆ ನೆಮ್ಮದಿ ತಂದುಕೊಡುವಂತೆ ಹೋರಾಟಗಾರರು ಆಗ್ರಹಿಸಿದರು. ಸಂಘಟನೆಯ ಪ್ರಮುಖರಾದ ಮೋಕ್ಷಮ್ಮ, ಹನುಮೇಶ್, ಶಾಂಭವಿ, ಭೀಮಮ್ಮ, ಶರಣಮ್ಮ, ಲಕ್ಷ್ಮಿ, ಶಾರದಮ್ಮ, ಪ್ರೇಮಾ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

