'ಹರಾಜಿನಲ್ಲಿ ಭ್ರಷ್ಟಾಚಾರ ನಡೆದಿಲ್ಲ'
ಮುದಗಲ್: ಸ್ಥಳೀಯ ಪಟ್ಟಣ ಪಂಚಾಯಿತಿ ವಾಣಿಜ್ಯ ಮಳಿಗೆಗಳ ಕಟ್ಟು ಬಾಕಿದಾರರಿಂದ 18 ಲಕ್ಷ ಬಾಕಿ ವಸೂಲಿ ಮಾಡಲಾಗಿದೆ ಎಂದು ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಒಂದು ವರ್ಷದಿಂದ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಬಾಡಿಗೆ ಕಟ್ಟದೆ ಬಿಟ್ಟಿದ್ದರು. ಸರ್ಕಾರದ ನಿಯಮಾವಳಿ ಪ್ರಕಾರ ಬಾಕಿದಾರರಿಗೆ ನೋಟಿಸ್ ನೀಡಿ ಬಾಕಿ ಹಣ ಪಾವತಿಸುವಂತೆ ಸೂಚಿಸಲಾಗಿತ್ತು. ಬಾಕಿದಾರರಿಂದ ಒಟ್ಟು 18 ಲಕ್ಷ ಬಾಕಿ ವಸೂಲಿ ಮಾಡಿ ಸರ್ಕಾರದ ನಿಯಮಾನುಸಾರ ಮಳಿಗೆಗಳನ್ನು ಮರು ಹರಾಜು ಮಾಡಲಾಗಿದೆ. ಹರಾಜು ಮಾಡುವ ಬಗ್ಗೆ ಪತ್ರಿಕೆಯಲ್ಲಿ ಜಾಹೀರಾತು ನೀಡಲಾಗಿದೆ ಎಂದರು.
ಕರಪತ್ರಗಳನ್ನು ಹಂಚಲಾಗಿದೆ. ಹರಾಜಿನಲ್ಲಿ ಭಾಗವಹಿಸುವವರಿಂದ 50 ಸಾವಿರ ಠೇವಣಿ ಡಿಡಿ ಪಡೆಯಲಾಗಿದೆ. ಆಡಳಿತಾಧಿಕಾರಿಗಳ ಸಮಕ್ಷಮದಲ್ಲಿ ಹರಾಜು ಪ್ರಕ್ರಿಯೆ ನಡೆಸಲಾಗಿದೆ. ಬಾಡಿಗೆಯನ್ನು ಲೋಕೋಪಯೋಗಿ ಇಲಾಖೆ ನಿಗದಿಪಡಿಸಿದ ದರದಲ್ಲಿ ನಿಗದಿಪಡಿಸಿ, ಬೋಲಿ ಮಾಡಿ ಹರಾಜು ಮಾಡಲಾಗಿದೆ ಎಂದು ತಿಳಿಸಿದರು.
ಆರೋಪದಲ್ಲಿ ಹುರುಳಿಲ್ಲ: ವಾಣಿಜ್ಯ ಮಳಿಗೆಗಳ ಹರಾಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲ ಸಂಘಟನೆಗಳು ಮಾಡಿರುವ ಆರೋಪದಲ್ಲಿ ಉರುಳಿಲ್ಲ. ಸಂಘಟಕರು ತಮ್ಮ ಬಳಿ ಮಾಹಿತಿ ಪಡೆಯದೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸ್ಪಸ್ಟಪಡಿಸಿದರು. ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿವೆ. ಚಾವಡಿಯಿಂದ ಹಳೆಪೇಟೆ ರಸ್ತೆ ಚರಂಡಿ, ಪೊಲೀಸ್ ಠಾಣೆಯಿಂದ ಮಸ್ಕಿ ರಸ್ತೆ ಪಕ್ಕದಲ್ಲಿ ಚರಂಡಿ ಕಾಮಗಾರಿ, ಡಾಂಬರ್ ರಸ್ತೆ ಕಾಮಗಾರಿ, ಸಾರ್ವಜನಿಕ ಮಹಿಳಾ ಶೌಚಾಲಯಗಳ ಕಾಮಗಾರಿ ಪ್ರಗತಿಯಲ್ಲಿವೆ. ಬಸ್ ನಿಲ್ದಾಣದ ಪಕ್ಕದಲ್ಲಿ ವಾಣಿಜ್ಯ ಮಳಿಗೆಗಳ ಕಾಮಗಾರಿ ಆರಂಭಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

