ಅಭಿವೃದ್ಧಿಯಲ್ಲಿ ಮಾತ್ರ ರಾಜಕೀಯ ಬೇಡ
ಕ.ಪ್ರ. ವಾರ್ತೆ, ಮುದಗಲ್, ಜೂ.20
ಚುನಾವಣೆಯಲ್ಲಿ ಮಾತ್ರ ರಾಜಕೀಯ ಮಾಡಬೇಕು. ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಸಮೀಪದ ಉಪ್ಪಾರನಂದಿಹಾಳ ಗ್ರಾಮದಲ್ಲಿ 5ನೇ ಹಂತದ ಸುವರ್ಣ ಗ್ರಾಮ ಯೋಜನೆಯಡಿ ನಿರ್ಮಿಸಲಾಗುತ್ತಿರುವ 32 ಲಕ್ಷ ವೆಚ್ಚದಲ್ಲಿ ರಸ್ತೆ, ಚರಂಡಿ, ಅಂಗನವಾಡಿ ಕಟ್ಟಡ, ಸೋಲಾರ ಬೀದಿ ದೀಪ, ತ್ಯಾಜ್ಯ ವಿಲೇವಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣಕ್ಕೆ ಮೊದಲಾದ್ಯತೆ: ತಾಲೂಕಿನ ಸಾಕಷ್ಟು ಹಳ್ಳಿಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ. ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆ, ಪ್ಲೋರೈಡ್ ನೀರು ಸೇವನೆಯಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಶೈಕ್ಷಣಿಕವಾಗಿ ಹಿಂದುಳಿದಿರುವ ತಾಲೂಕಿನಲ್ಲಿ ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದರು.
ಕಳೆದ ಅವಧಿಯಲ್ಲಿ ನಂದವಾಡಗಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಅವಧಿಯಲ್ಲಿ ಯೋಜನೆಗೆ ಚಾಲನೆ ನೀಡಿ ಈ ಭಾಗದ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಗ್ರಾಮೀಣ ಪ್ರದೇಶದ ಯಾವುದೇ ಪಕ್ಷದ ಮುಖಂಡರು ತಮಗೆ ಸಲಹೆ ನೀಡಿದರೆ ಸ್ವಾಗತಿಸಿ, ಅದಕ್ಕೆ ಸ್ಪಂದಿಸುವುದಾಗಿ ಹೇಳಿದರು.
ಜನತೆಗೆ ಅಭಿನಂದನೆ: ಎರಡನೇ ಬಾರಿಗೆ ತಮ್ಮನ್ನು ಪುನಾ ಆಯ್ಕೆ ಮಾಡಿದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಎಸ್.ಆರ್. ರಸೂಲ್, ನಾಗರಹಾಳ ವಿಎಸ್ಎಸ್ಎನ್ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಗಿರಿಮಲ್ಲನಗೌಡ, ಗ್ರಾಪಂ ಅಧ್ಯಕ್ಷೆ ರೇಣುಕಮ್ಮ, ಉಪಾಧ್ಯಕ್ಷೆ ಶಂಕ್ರಮ್ಮ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಅಮೀರಬೇಗ, ತಾಪಂ ಸದಸ್ಯ ಗುಂಡಪ್ಪ ಸಾಹುಕಾರ, ಮುಖಂಡರಾದ ಗೋವಿಂದ ನಾಯಕ್, ಪಪಂ ಸದಸ್ಯ ವೀರೇಶ ವಡ್ಡರ್, ಹೇಮಂತಕುಮಾರ, ಖಾಜಾಪಾಷಾ, ಬಂದೇನವಾಜ, ಅಬ್ದುರ್ ರಹುಫ್, ಎಂ.ಬಿ.ಪಾಟೀಲ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

