ವಿವಿಗೆ ನೇಮಕ, ಸ್ಥಳೀಯರಿಗೆ ಆದ್ಯತೆ: ಕರವೇ ಆಗ್ರಹ
ರಾಯಚೂರು: ರಾಯಚೂರು ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಹಾಗೂ ವಿಸ್ತರಣಾ ಪರಿಷತ್ಗೆ ಸ್ಥಳೀಯರಿಗೆ ನೇಮಿಸುವಂತೆ ಕರವೇ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಕೃಷಿ ಸಚಿವ ಕೃಷ್ಣ ಭೈರೇಗೌಡ ಭಾನುವಾರ ಮನವಿ ಸಲ್ಲಿಸಿದ ಕರವೇ ಕಾರ್ಯಕರ್ತರು, ಈಚೇಗೆ ರಾಯಚೂರು ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಹಾಗೂ ವಿಸ್ತರಣಾ ಪರಿಷತ್ಗೆ ನೇಮಿಸಿದವರಲ್ಲಿ ಎಲ್ಲರೂ ಹೊರ ಜಿಲ್ಲೆಯವರಾಗಿದ್ದಾರೆ. ಇದರಿಂದ ಹೈ.ಕ. ಭಾಗದವರಿಗೆ ಅನ್ಯಾಯವಾಗಿದೆ ಎಂದು ದೂರಿದರು.
ಹೈ.ಕ.ಭಾಗದ ಯಾಮೊಬ್ಬ ವ್ಯಕ್ತಿಯನ್ನು ನೇಮಕಕ್ಕೆ ಪರಿಗಣಿಸದೇ ಹೊರಗಿನವರನನ್ನೇ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ನೇಮಕಾತಿಯಲ್ಲಿ ಮೊದಲಾದ್ಯತೆ ನೀಡಬೇಕೆಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ ಅವರು, ರಾಜ್ಯಪಾಲರು ಮಾಡಿರುವ ನೇಮಕಾತಿಯು ತಮ್ಮ ವ್ಯಾಪ್ತಿಗೆ ಮೀರಿದ್ದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಈ ನಿಟ್ಟಿನಲ್ಲಿ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದರು.
ಕರವೇ ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಜೈನ್, ಖಲೀಲ್ ಪಾಷಾ, ಮಾನಸಿಂಗ್ ಠಾಕೂರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

