ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ: ಶರಣಪ್ರಕಾಶ್
ರಾಯಚೂರು: ಮಣಿಪಾಲ್ನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆ ಸ್ಥಳೀಯ ಮತ್ತು ಹೊರ ರಾಜ್ಯಗಳಿಂದ ಆಗಮಿಸಿ ವೈದ್ಯಕೀಯ ಶಿಕ್ಷಣದ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡಲು ಆದೇಶಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವೈದ್ಯ ವಿದ್ಯಾರ್ಥಿನಿ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಈಗಾಗಲೇ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಇಂಥ ಪ್ರಕರಣಗಳು ನಡೆಯದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಬೀದರ್, ರಾಯಚೂರು, ಬೆಳಗಾವಿ, ಮೈಸೂರು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಸಿಐ ವಿವಿಧ ಕಾರಣಗಳನ್ನೊಡ್ಡಿ ಪ್ರವೇಶಕ್ಕೆ ಅನುಮತಿ ನೀಡಲು ನಿರಾಕರಿಸಿತ್ತು. ಆದರೆ ರಾಜ್ಯ ಸರ್ಕಾರದ ಭರವಸೆ ಮೇರೆಗೆ ಬೆಳಗಾವಿ, ಹುಬ್ಬಳ್ಳಿ, ಮೈಸೂರು ಮೆಡಿಕಲ್ ಕಾಲೇಜುಗಳಿಗೆ ಪ್ರವೇಶವಕಾಶ ಕಲ್ಪಿಸಿದೆ. ಶೀಘ್ರವೇ ಬೀದರ್ ಮತ್ತು ರಾಯಚೂರು ಕಾಲೇಜುಗಳಿಗೆ ಎಂಸಿಐ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದರು. 371ನೇ ಕಲಂ(ಜೆ) ಜಾರಿ ಹಿನ್ನೆಲೆ ರಚಿಸಿರುವ ಸಂಪುಟ ಉಪಸಮಿತಿಯು ಜು.8ರ ನಂತರ ಕೇಂದ್ರ ಸರ್ಕಾರಕ್ಕೆ ತನ್ನ ಅಂತಿಮ ವರದಿ ಸಲ್ಲಿಸಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

