ರಾಯಚೂರು

'ಮಲೇರಿಯಾ ನಿಯಂತ್ರಣ ಎಲ್ಲರ ಜವಾಬ್ದಾರಿ'

Published On :

ದೇವದುರ್ಗ: ಮಲೇರಿಯಾ ರೋಗ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಮುದಾಯದ ಸಹಕಾರ ಮತ್ತು ಮುಂಜಾಗ್ರತೆ ಅಗತ್ಯ ಎಂದು ತಾಲೂಕಿನ ಅರಕೇರಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೀತಿ ಪಾಟೀಲ್ ಸಲಹೆ ನೀಡಿದರು.
ಈಚೇಗೆ ಅರಕೇರಾ ಗ್ರಾಮದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಅರಕೇರಾ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ವೇಳೆ ವಿದ್ಯಾರ್ಥಿಗಳಿಂದ ಗ್ರಾಮದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ನಾಗಡದಿನ್ನಿ ಗ್ರಾಪಂನ ಕೆ. ಶಿವಕುಮಾರ ಪಾಟೀಲ್, ಗಂಗಾಧರ ಸಾಹುಕಾರ, ಶಿವಕುಮಾರ ಹೆಗ್ಗಡದಿನ್ನಿ, ವಿಜಯಲಕ್ಷ್ಮೀ ನೀಲಗಲ್, ನಾಗಡದಿನ್ನಿ ಉಪಕೇಂದ್ರದ ರಮೇಶ ಮಸರಕಲ್, ಹನುಮಂತ ಎಕ್ಬೋಟಿ, ಸಜ್ಜನ್ ಮಹಾಬಳೇಶ್ವರ, ಜ್ಯೋತಿ ಲಕ್ಷ್ಮಿ, ಸಂಗನಬಸವ, ವೆಂಕಟಪ್ಪ, ಮೃತ್ಯುಂಜಯಸ್ವಾಮಿ ಸೇರಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿದ್ದರು.
ಡೆಂಘೀ; ಮುಂಜಾಗ್ರತಾ ಕ್ರಮ
ರಾಯಚೂರು: ತಾಲೂಕಿನ ತುಂಗಭದ್ರಾ ಗ್ರಾಮದಲ್ಲಿ ಇತ್ತೀಚೆಗೆ ಡೆಂಘೀ ಹಾಗೂ ಮಲೇರಿಯಾ ಜ್ವರ ಕುರಿತು ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ಸರ್ವೇಕ್ಷಣಾ ಘಟಕದ ಕೀಟ ಶಾಸ್ತ್ರಜ್ಞ ರೋಷನ್ ಅಲಿ ಅವರು ತಂಡದೊಂದಿಗೆ ಗ್ರಾಮಕ್ಕೆ ತೆರಳಿ ಸೊಳ್ಳೆಗಳಿಂದ ಬರುವ ರೋಗಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ. ನಾಗರಾಜ, ಕಿರಿಯ ಆರೋಗ್ಯ ಸಹಾಯಕಿ ಪ್ರೇಮಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.