ರಾಯಚೂರು

ಬಿಲ್ಲಮರಾಜನ ಕೆರೆಗೆ ಅಭಿವೃದ್ಧಿ ಭಾಗ್ಯ

Published On :

ಕನ್ನಡಪ್ರಭ ವಾರ್ತೆ   ಲಿಂಗಸ್ಗೂರು   ಜೂ.25
ನಗರ ಸೌಂದರ್ಯೀಕರಣಕ್ಕೆ ಹೆಚ್ಚಿನ ಆಸಕ್ತಿ ತೋರಿದ ಸಹಾಯಕ ಆಯುಕ್ತ ಟಿ.ಯೋಗೇಶ ಹಾಗೂ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ ನೇತೃತ್ವದ ಅಧಿಕಾರಿಗಳು ಮಂಗಳವಾರ ಐತಿಹಾಸಿಕ ಕರಡಕಲ್ ಕೆರೆ  ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿರುವುದು ನಾಗರಿಕರಲ್ಲಿ ಸಂತಸ ಮೂಡಿಸಿದೆ.
ಪಟ್ಟಣದ ಬಸ್ ನಿಲ್ದಾಣದಿಂದ ಪದವಿ ಪೂರ್ವ ಕಾಲೇಜುವರೆಗೆ ಮುಖ್ಯರಸ್ತೆ ಅಕ್ಕಪಕ್ಕ ತಾತ್ಕಾಲಿಕವಾಗಿ ಹಾಕಲಾಗಿದ್ದ ಡಬ್ಬಾ ಅಂಗಡಿ, ಶೆಡ್ಡುಗಳನ್ನು ಸೋಮವಾರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಅದರಂತೆ ಇತಿಹಾಸ ಪ್ರಸಿದ್ಧ ಕರಡಕಲ್ ಗ್ರಾಮವನ್ನು ಆಳಿದ 3ನೇ ಭಿಲ್ಲಮನು(ಕ್ರಿ.ಶ.1025-1050) ನಿರ್ಮಿಸಿದ ಐತಿಹಾಸಿಕ ಕೆರೆಯ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೂಲಕ ನಗರ ಸೌಂದರ್ಯೀಕರಣಕ್ಕೆ ಮುಂದಾಗಿದ್ದಾರೆ.
ವರದಿ ಪರಿಣಾಮ: ಕೆರೆಯ ದಡದಲ್ಲಿ ಜಾಲಿ ಮರಗಳು ದಟ್ಟವಾಗಿ ಬೆಳೆದು ನಿಂತಿದ್ದು, ಅಲ್ಲದೆ ತ್ಯಾಜ್ಯ ವಸ್ತುಗಳನ್ನು ಕೆರೆಯಲ್ಲಿ ಹಾಕಲಾಗುತ್ತಿತ್ತು. ಹಂದಿ, ನಾಯಿ ಸೇರಿದಂತೆ ಪ್ರಾಣಿಗಳು ಸತ್ತರೆ ಕೆರೆಯಲ್ಲಿ ಹಾಕುವ ಮೂಲಕ ಕಲುಷಿತ ವಾತಾವರಣ ಸೃಷ್ಟಿಯಾಗಿತ್ತು. ಈ ಕುರಿತು 'ಕನ್ನಡಪ್ರಭ' ಪತ್ರಿಕೆಯಲ್ಲಿ ಮೇ 29ರಂದು 'ಅಭಿವೃದ್ಧಿ ಭಾಗ್ಯ ಕಾಣುವುದೇ ಇತಿಹಾಸ ಪ್ರಸಿದ್ಧ ಬಿಲ್ಲಮರಾಜನ ಕೆರೆ' ಎಂಬ ಕುರಿತು ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು.
ಅಧಿಕಾರಿಗಳಿಂದ ಪರಿಶೀಲನೆ: ಮಂಗಳವಾರ ಸಹಾಯಕ ಆಯುಕ್ತ ಟಿ. ಯೋಗೇಶ ಹಾಗೂ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ ಅವರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಕೆರೆಯ ದಂಡೆ ಮೇಲೆ ದಟ್ಟವಾಗಿ ಬೆಳೆದು ನಿಂತಿದ್ದ ಜಾಲಿ ಮರಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡರು. ಈ ಕುರಿತು ಮಾಹಿತಿ ನೀಡಿದ ಮುಖ್ಯಾಧಿಕಾರಿ ಬಿರಾದಾರ, ಬಿಆರ್ಜಿಎಫ್ ಯೋಜನೆಯಡಿ 60 ಲಕ್ಷ ವೆಚ್ಚದಲ್ಲಿ ಕೆರೆಯ ಸುತ್ತ ಬಂಡಿಂಗ್ ಮಾಡುವ ಉದ್ದೇಶ ಹೊಂದಲಾಗಿದೆ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.