ರಾಯಚೂರು

ರಕ್ಷಣೆ: ಗಂಭೀರ ಕ್ರಮಕ್ಕೆ ಆಗ್ರಹ

Published On :

ಗುಲ್ಬರ್ಗ: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಜಲಪ್ರವಾಹದಲ್ಲಿ ಸಿಲುಕಿರುವ ರಾಜ್ಯದ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರುವ ಕಾರ್ಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಗಾಯತ್ರಿ ಬ್ರಾಹ್ಮಣ ಮಹಿಳಾ ಟ್ರಸ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಟ್ರಸ್ಟ್ ಅಧ್ಯಕ್ಷೆ ರಾಜಶ್ರೀ ದೇಶಮುಖ ಅವರು, ಮೂರು ದಿನಗಳ ಕಾಲ ಸುರಿದ ಭೀಕರ ಮಳೆಯಿಂದ ಪವಿತ್ರ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿದ ಲಕ್ಷಾಂತರ ಭಕ್ತಾದಿಗಳು ನಲುಗಿ ಹೋಗಿದ್ದು, ಅನ್ನ- ನೀರು, ಆಶ್ರಯ, ಔಷಧ ಸೇರಿದಂತೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ಇದರಿಂದ ವಯೋವೃದ್ಧರು ಮತ್ತು ಮಕ್ಕಳು, ಮಹಿಳೆಯರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.