ಆಯನೂರು ಪ್ರೌಢಶಾಲೆಗೆ ನಿವೇಶನ ನೀಡಲು ಆಗ್ರಹ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.26
ತಾಲೂಕಿನ ಆಯನೂರಲ್ಲಿ ಸರ್ಕಾರಿ ಪ್ರೌಢಶಾಲೆ ಇದ್ದು, ಕಟ್ಟಡಕ್ಕೆ ಜಾಗ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಸರ್ಕಾರದ ಜಮೀನ ಸರ್ವೆ ನಂ. 10ರಲ್ಲಿರುವ 5.25 ಎಕರೆ ಜಮೀನನ್ನು ಪ್ರೌಢಶಾಲೆಗೆ ಸ್ವಾಧೀನಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವೃಷಭೇಂದ್ರಯ್ಯ ಅವರನ್ನು ಆಯನೂರು ಗ್ರಾಮದ ಶೇಖರಗೌಡ, ಅಮರೇಶ, ಹುಸೇನಸಾಬ, ವೆಂಕೋಬ ಮತ್ತಿತರರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2011- 12ನೇ ಸಾಲಿನಲ್ಲಿ ಆರ್ಎಂಎಸ್ಎ ಯೋಜನೆಯಡಿ ಪ್ರೌಢಶಾಲೆ ಮಂಜೂರಾಗಿದ್ದು, ಸ್ಥಳಾವಕಾಶದ ಕೊರತೆಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ಪ್ರೌಢಶಾಲಾ ತರಗತಿಗಳು ನಡೆಯುತ್ತಿವೆ. ಪ್ರಾಥಮಿಕ ಶಾಲಾ ಮಕ್ಕಳು ಮತ್ತು ಪ್ರೌಢಶಾಲಾ ಮಕ್ಕಳು ಒಂದೇ ಕಟ್ಟಡದಲ್ಲಿ ಓದಲು ಅನಾನುಕೂಲವಾಗುತ್ತಿವೆ. ಸರ್ಕಾರದ ಜಮೀನಿದ್ದರೂ ಆ ಜಮೀನನ್ನು ಬಿಇಒ ಮುತುವರ್ಜಿ ವಹಿಸಿ ತಮ್ಮ ಇಲಾಖೆಗೆ ಪಡೆದುಕೊಳ್ಳಬೇಕು. ಇದರಿಂದ ಮಂಜೂರಾದ ಕಟ್ಟಡ ಕಟ್ಟಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಮನವಿಗೆ ಸ್ಪಂದಿಸುತ್ತಿಲ್ಲ: ಶಾಲಾ ಮುಖ್ಯೋಪಾಧ್ಯಾಯರು ಮತ್ತು ಗ್ರಾಮಸ್ಥರು ಹಲವಾರು ಬಾರಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಶಿಕ್ಷಣ ಇಲಾಖೆಗೆ ಜಮೀನನನ್ನು ವಹಿಸಿ ಕೊಡುವಂತೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಜನಪರ ಕಾಳಜಿಯ ತಹಸೀಲ್ದಾರರಾದ ಬಿ.ಟಿ. ಕುಮಾರಸ್ವಾಮಿ ಅವರು ಈ ಕುರಿತು ಕೂಡಲೇ ಗಮನಹರಿಸಿ ಆಯನೂರು ಗ್ರಾಮದ ಸರ್ಕಾರಿ ಜಮೀನನ್ನು ಪ್ರೌಢಶಾಲೆ ಕಟ್ಟಡ ಕಟ್ಟಿಸಲು ಶಿಕ್ಷಣ ಇಲಾಖೆಗೆ ಒಪ್ಪಿಸುವ ಮೂಲಕ ಗ್ರಾಮೀಣ ಮಕ್ಕಳ ಶಿಕ್ಷಣದ ಪ್ರಗತಿಗೆ ಸಹಕರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಸರ್ಕಾರದಿಂದ ಶಾಲಾ ಕಟ್ಟಡಕ್ಕೆ ಬಿಡುಗಡೆಯಾದ ಹಣ ವಾಪಸ್ ಹೋಗದಂತೆ ತಡೆಗಟ್ಟಿ ಪ್ರೌಢಶಾಲಾ ಕಟ್ಟಡ ಕಟ್ಟಿಸಲು ಶಾಸಕ ಬಾದರ್ಲಿ ಹಂಪನಗೌಡರು ಶ್ರಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

