ಆರ್ಟಿಪಿಎಸ್: ಬಜೆಟ್ನಲ್ಲಿ ಅನುದಾನಕ್ಕೆ ಆಗ್ರಹ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಒಂದು ಮತ್ತು ಎರಡನೇ ಘಟಕಗಳು 25 ವರ್ಷ ಹಳೆಯದಾಗಿದ್ದು ಅವುಗಳ ಸಮಗ್ರ ದುರಸ್ತಿಗೆ ಬಜೆಟ್ನಲ್ಲಿ ಸೂಕ್ತ ಅನುದಾನ ನಿಗದಿ ಮಾಡುವಂತೆ ಮಾಜಿ ಶಾಸಕ ಸೈಯದ್ ಯಾಸೀನ್ ಒತ್ತಾಯಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ಆರ್ಟಿಪಿಎಸ್ 1 ಮತ್ತು 2ನೇ ಘಟಕಗಳೆರಡೂ ಹಳೆಯದಾಗಿದ್ದು ಅವುಗಳಿಂದ ನಿರೀಕ್ಷಿತ ಮಟ್ಟದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವುಗಳ ಪುನಶ್ಚೇತನಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಮಾಡಿದ್ದಾರೆ.
ಬೇಸಿಗೆಯಲ್ಲಿ ಆರ್ಟಿಪಿಎಸ್ ಘಟಕಗಳಿಗೆ ಸಮರ್ಪಕ ನೀರು ದೊರೆಯುವಂತೆ ಮಾಡಲು ನೀರಿನ ಸಂಗ್ರಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಪೆಕ್ ಆಸ್ಪತ್ರೆಯ ಪುನಾರಂಭಕ್ಕೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ಪತ್ನಿಯ ಕೊಲೆ
ಗುಲ್ಬರ್ಗ: ಪತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಂಗಳವಾರ ನಗರದ ನಯಾಮೊಹಲ್ಲಾ ಬಡಾವಣೆಯಲ್ಲಿ ನಡೆದಿದೆ. ಪರವೀನ ಬೇಗಂ ಗಂಡ ಶೇಖ ಮಹಿಬೂಬ್ ಎಂಬ ಮಹಿಳೆ ಮೃತಪಟ್ಟಿದ್ದಾಳೆ. ಮನೆಗೆ ಆಹಾರ ತೆಗೆದುಕೊಂಡು ಬಾ ಎಂದು ಹೇಳಿದ್ದಕ್ಕೆ ಗಂಡ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೃತಳ ಸಹೋದರ ಅಲ್ಲಾವುದ್ದೀನ್ ಪಟೇಲ್ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

