ರಾಯಚೂರು

ಜು.3ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ; ಸಕಲ ಸಿದ್ಧತೆ

Published On :

ರಾಯಚೂರು: ಜಿಲ್ಲೆಯಲ್ಲಿ ಜು.3ರಿಂದ ನಡೆಯುವ ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಪೂರ್ವಭಾವಿ ಸಭೆ ಸಿದ್ಧತೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಪರೀಕ್ಷೆ ಸುಗಮ ನಡೆಸಲು ಒಟ್ಟು 11 ಪರೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ಕೇಂದ್ರಗಳಿಂದ 8475 ಪರೀಕ್ಷಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆಂದು ತಿಳಿಸಿದರು. ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರ ನೇಮಕ ಹಾಗೂ ನೀರಿನ ವ್ಯವಸ್ಥೆಯನ್ನು ಸಂಬಂಧಿಸಿದ ಪರೀಕ್ಷೆ ಕೇಂದ್ರದ ಮುಖ್ಯಸ್ಥರು ನಿರ್ವಹಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯಲು ಉಪನಿರ್ದೇಶಕರ ನೇತೃತ್ವದಲ್ಲಿ ಒಟ್ಟು 6 ತಂಡಗಳನ್ನು ಸಭೆಯಲ್ಲಿ ರಚಿಸಲಾಯಿತು.
ಪರೀಕ್ಷೆಗಳನ್ನು ಸುಗಮವಾಗಿ ಶಾಂತ ರೀತಿಯಿಂದ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗೆ ಮನವಿ ಮಾಡಲು ಸಭೆ ನಿರ್ಧರಿಸಿತು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್, ಡಿಡಿಪಿಯು ಸಿ.ಟಿ. ಕಲ್ಲಯ್ಯ, ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಪ್ರಾಂಶುಪಾಲರು, ತಹಸೀಲ್ದಾರರು ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.