ಬ್ಲಡ್ ಬಸ್ ಜಾಗೃತಿ ಜಾಥಾಕ್ಕೆ ಶಾಸಕ ಚಾಲನೆ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.26
ವಿಪತ್ತು, ಅಪಘಾತಕ್ಕೆ ಒಳಗಾಗಿ ಜೀವನ್ಮರಣದ ಮಧ್ಯೆ ಹೋರಾಡುತ್ತಿರುವವರಿಗೆ ತುರ್ತು ಅಗತ್ಯವಿರುವ ರಕ್ತ ಸಂಗ್ರಹಿಸಲು ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಎರಡು ರಕ್ತದಾನ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಿದೆ. ಶಿಬಿರಗಳಲ್ಲಿ ಸಾರ್ವಜನಿಕರು ಹೆಚ್ಚು ರಕ್ತದಾನ ಮಾಡುವ ಮೂಲಕ ಸಹಕರಿಸಬೇಕೆಂದು ಶಾಸಕ ಹಂಪನಗೌಡ ಬಾದರ್ಲಿ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಬೆಂಗಳೂರು ಇವರ ಸಹಯೋಗದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ರಾಯಚೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬ್ಲಡ್ ಮೊಬೈಲ್ ಬಸ್ ಜಾಗೃತಿ ಜಾಥಾ ಹಾಗೂ ರಕ್ತದಾನ ಶಿಬಿರಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಈ ವೇಳೆ ತಾಪಂ ಅಧ್ಯಕ್ಷೆ ಬಸ್ಸಮ್ಮ ಕೊಟ್ರಪ್ಪ, ಉಪಾಧ್ಯಕ್ಷ ಮಲ್ಲಪ್ಪ ಗೊಮರ್ಸಿ, ಜಿಪಂ ಸದಸ್ಯರಾದ ಚಂದುಸಾಬ ಮುಳ್ಳೂರು, ಶಿವನಗೌಡ ಎಲೆಕೂಡ್ಲಗಿ, ತಾಪಂ ಸದಸ್ಯ ಮುದುಕಪ್ಪ, ಡಿಎಚ್ಒ ಡಾ. ವೆಂಕಟೇಶ ನಾಯಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ನಾರಾಯಣಪ್ಪ, ತಾಲೂಕು ನೂಡಲ್ ಅಧಿಕಾರಿ ಡಾ. ಸುರೇಂದ್ರಬಾಬು, ಟಿಎಚ್ಒ ಡಾ. ಸಯ್ಯದ್, ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಕರವೀರಪ್ರಭು ಕ್ಯಾಲಕೋಡ, ರಿಮ್ಸ್ನ ಡಾ. ಪ್ರಸನ್ನ ಕುಮಾರ ಮತ್ತು ಸರ್ಕಾರಿ ಪದವಿ- ಪಪೂ ಕಾಲೇಜು ಹಾಗೂ ಕನಕದಾಸ ಪದವಿ ಕಾಲೇಜು ವಿದ್ಯಾರ್ಥಿಗಳು ಮತ್ತು ಎನ್ನೆಸ್ಸೆಸ್ ಘಟಕದ ಅಧಿಕಾರಿಗಳು ಮತ್ತು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಈ ವೇಳೆ ನಗರಸಭೆ ಸದಸ್ಯರು, ಸಾರ್ವಜನಿಕರು ಮತ್ತು ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

