ರಾಯಚೂರು

ಮಣಿಪಾಲ ಪ್ರಕರಣ: ವಿದ್ಯಾರ್ಥಿನಿಯರ ಆಕ್ರೋಶ

Published On :

ಕನ್ನಡಪ್ರಭ ವಾರ್ತೆ, ಸಿಂಧನೂರು, ಜೂ.26
ಸಿಂಧನೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಒತ್ತಾಯಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ದೇಶದ ವಿವಿಧೆಡೆ ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ಅತ್ಯಾಚಾರಗಳು ನಡೆಯುತ್ತಿರುವುದರಿಂದ ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಹಗಲಲ್ಲಿ ತಿರುಗಾಡಲು ಹಿಂದು -ಮುಂದು ನೋಡುವಂತಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಅತ್ಯಾಚಾರ ತಡೆಗೆ ಸಮಗ್ರ ಕಾನೂನು ರೂಪಿಸಬೇಕು. ಅತ್ಯಾಚಾರಕ್ಕೆ ಕಾರಣರಾದವರನ್ನು ಕಾನೂನಿನ್ವಯ ಶಿಕ್ಷೆ ನೀಡಬೇಕೆಂದು ಎಬಿವಿಪಿ ಜಿಲ್ಲಾ ಸಂಚಾಲಕ ಶರಣಯ್ಯ ಜೆ.ಗುಡದೂರು ಆಗ್ರಹಿಸಿದರು.
ತಾಲೂಕಾದ್ಯಂತ ಪದವಿ ಪೂರ್ವ ಕಾಲೇಜುಗಳಲ್ಲಿ ಅಗತ್ಯ ಉಪನ್ಯಾಸಕರ ನೇಮಕ ಮಾಡಬೇಕು. ಸಕಾಲಕ್ಕೆ ಪಠ್ಯಪುಸ್ತಕಗಳನ್ನು ವಿತರಿಸಬೇಕೆಂದು ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಮನವಿ ಮಾಡಿದರು.
ಮುಖಂಡರಾದ ಶಿವಪುತ್ರ, ಮಹಾಂತೇಶ, ಮಂಜು, ನಿರಂಜನ, ವೀರೇಶ, ಶಾರದಾ, ಅನಿತಾ ಸೇರಿದಂತೆ ವಾಸವಿ ಬಾಲಕಿಯರು ಪ.ಪೂ. ಕಾಲೇಜಿನ ಹಾಗೂ ಸರ್ಕಾರಿ ಬಾಲಕರಿಯರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.