ರಾಯಚೂರು

'ಸಹಕಾರಿ ರಂಗದ ಹೆಚ್ಚಿನ ನೆರವಿಗೆ ಸರ್ಕಾರ ಬದ್ಧ'

Published On :

ಕನ್ನಡಪ್ರಭ ವಾರ್ತೆ   ದೇವದುರ್ಗ   ಜೂ.27
ಸಹಕಾರಿ ರಂಗದಿಂದ ರೈತರಿಗೆ ಹೆಚ್ಚಿನ ನೆರವು ದೊರೆಯುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ಶ್ರೀ ಗುರುರಾಮಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟಿಸಿ ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ ರಾಜ್ಯದಲ್ಲಿ ಸಹಕಾರಿ ರಂಗವು ಸಾಕಷ್ಟು ಪ್ರಗತಿ ಕಂಡಿದೆ. ಆದರೆ ಹೆಚ್ಚಿನ ರೈತರಿಗೆ ಸಹಕಾರಿ ರಂಗದ ನೆರವು ದೊರಕಿಸಿಕೊಡುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ಪಿಕಾರ್ಡ್ ಬ್ಯಾಂಕುಗಳ ಪುನಶ್ಚೇತನ: ರಾಜ್ಯದ ಕೆಲ ಪಿಕಾರ್ಡ್ ಬ್ಯಾಂಕಗಳನ್ನು ಪುನಶ್ಚೇತನಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುತ್ತದೆ. ಅದರಂತೆ ಯಶಸ್ವಿನಿ ಯೋಜನೆಯನ್ನು ಕೂಡಾ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ ಎಂದರು.
ಶಾಸಕ ವೆಂಕಟೇಶ ನಾಯಕ ಮಾತನಾಡಿ, ಸಹಕಾರಿ ಸಂಘಗಳು ಕೇವಲ ಪಟ್ಟಣಕ್ಕೆ ಸೀಮಿತಗೊಳ್ಳದೇ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತಹ ಕಾರ್ಯ ಕೈಗೊಳ್ಳುವಂತೆ ತಿಳಿಸಿ, ರೈತರಲ್ಲಿ ಉಳಿತಾಯ ಮನೋಭಾವ ಮೂಡಿಸುವ ಕಾರ್ಯವನ್ನು ಸಹಕಾರಿ ರಂಗದವರು ಮಾಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಸ್ಕಿ ಕ್ಷೇತ್ರ ಶಾಸಕ ಹಾಗೂ ಶ್ರೀ ಗುರುರಾಮಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರತಾಪಗೌಡ ಪಾಟೀಲ್, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಾಜಿ ಎಂಲ್ಸಿ ಮನೋಹರ ಮಸ್ಕಿ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎ.ವಸಂತಕುಮಾರ್, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಜಿಲ್ಲಾ ಆರ್ಡಿಸಿಸಿ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಪಾಟೀಲ್, ವಿ.ಎಂ. ಮೇಟಿ, ಅಕ್ಕಮಹಾದೇವಿ ಆರ್.ಪಾಟೀಲ್, ಎನ್. ವೆಂಕಟೇಶ ವಕೀಲರು, ಸಹಕಾರಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.