ರೈತರಿಗೆ 7 ಸಾವಿರ ಕೋಟಿ ಸಾಲ: ಮಹದೇವ ಪ್ರಸಾದ್
ಕ.ಪ್ರ. ವಾರ್ತೆ, ರಾಯಚೂರು, ಜೂ.27-
ರೈತರಿಗೆ ಸಹಕಾರಿ ರಂಗದಿಂದ ಸಾಲ ಸೌಲಭ್ಯ ಹೆಚ್ಚಿನ ಪ್ರಮಾಣದಲ್ಲಿ ದೊರೆಯುವಂತಾಗಲು 7 ಸಾವಿರ ಕೋಟಿ ಸಾಲ ವಿತರಣೆಯ ಉದ್ದೇಶ ಹೊಂದಲಾಗಿದೆ. ಅದೇ ರೀತಿ ಯಶಸ್ವಿನಿವಿಮಾ ಯೋಜನೆಯನ್ನು ಮುಂದುವರಿಸಲಾಗುತ್ತದೆ ಎಂದು ಸಹಕಾರ ಖಾತೆ ಸಚಿವ ಮಹದೇವ ಪ್ರಸಾದ್ ತಿಳಿಸಿದರು.
ನಗರದಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ ಸಹಕಾರಿ ಸಂಘಗಳ ಮೂಲಕ ರೈತರಿಗೆ 6 ಸಾವಿರ ಕೋಟಿ ಸಾಲ ವಿತರಣೆಯಾಗುತ್ತಿದ್ದು, ಈ ಪ್ರಮಾಣವನ್ನು 7 ಸಾವಿರ ಕೋಟಿಗೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ಶೇ. 25ರಷ್ಟು ಹೊಸಬರಿಗೆ: ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಸಾಲ ವಿತರಣೆ ಸರ್ಕಾರದ ಮೂಲ ಉದ್ದೇಶವಾಗಿದ್ದು, ಸಾಲ ವಿತರಣೆಯ ಮೊತ್ತದಲ್ಲಿ ಪ್ರತಿ ವರ್ಷ ಶೇ.25ರಷ್ಟು ಹೊಸಬರಿಗೆ ಸಾಲ ನೀಡಿಕೆಯಲ್ಲಿ ಆದ್ಯತೆ ನೀಡಬೇಕೆಂಬುದು ನಿರ್ಧಾರವಾಗಿದೆ. ಈ ಮೂಲಕ ಸಹಕಾರಿ ಕ್ಷೇತ್ರದಿಂದ ಹೊರಗುಳಿದ ರೈತರಿಗೆ ನೆರವಾಗುವುದು ಸರ್ಕಾರದ ಆಶಯ ಎಂದರು.
ಕಳೆದ ಅವಧಿಯಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರವು ರೈತರ ಸಾಲ ಮನ್ನಾ ಮಾಡಿತು. ಆದರೆ ಅದಕ್ಕೆ ಅಗತ್ಯ ಅನುದಾನ ಒದಗಿಸದಿರುವುದು ಸಹಕಾರ ರಂಗದ ಸಂಸ್ಥೆಗಳಿಗೆ ಹೊರೆ ಹೆಚ್ಚಿಸಿದೆ ಎಂದ ಅವರು, ಸಾಲ ಮರುಪಾವತಿ ಅವಧಿಯನ್ನೂ ಜೂ. 30ರ ಬದಲಿಗೆ ಜು. 30ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು.
1300 ಕೋಟಿ ಮೀಸಲಿಗೆ ಮನವಿ: ಬಿಜೆಪಿ ಘೋಷಿಸಿದ ಸಾಲ ಮನ್ನಾ ಕಾರ್ಯಕ್ರಮಕ್ಕೆ 800 ಕೋಟಿ ಮಾತ್ರ ಬಿಡುಗಡೆಯಾಗಿದ್ದು, ಜು.12ಕ್ಕೆ ಆರಂಭಗೊಳ್ಳುವ ಅಧಿವೇಶನದಲ್ಲಿ ಮಂಡಿಸುವ ಬಜೆಟ್ನಲ್ಲಿ 1,300 ಕೋಟಿಯನ್ನು ಸಾಲ ಮನ್ನಾ ಬಾಕಿ ಪಾವತಿಗೆ ಮೀಸಲಿಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

