ಕಸಾಪ; ಇಂದು ಸಾಹಿತ್ಯ ಸಿಂಚನ
ಕನ್ನಡಪ್ರಭ ವಾರ್ತೆ ಸಿಂಧನೂರು ಜೂ.28
ನಗರದ 17ನೇ ವಾರ್ಡ್ನ ಸರ್ವೋದಯ ಶಾಲೆಯ ಹತ್ತಿರವಿರುವ ಹೆಚ್. ಬಸವರಾಜ್ ವಕೀಲರ ಮನೆಯಲ್ಲಿ ನಾಳೆ ಜೂ.29 ಶನಿವಾರ ಸಂಜೆ 4ಕ್ಕೆ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಮಾಸಿಕ ಕಾರ್ಯಕ್ರಮ ಮನೆಯಂಗಳದಲ್ಲಿ ಸಾಹಿತ್ಯ ಸಿಂಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ತಿಳಿಸಿದ್ದಾರೆ.
ದೇವನೂರು ಮಹಾದೇವರ ಬದುಕು ಬರಹ, ಸ್ವರಚಿತ ಕವನ ವಾಚನ ಹಾಗೂ ಹುಲಿಹೈದರ್ ಲಕ್ಷ್ಮಮ್ಮ ಪುಣ್ಯಸ್ಮರಣೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಗರಸಭೆ ಸದಸ್ಯೆ ಆಶಾಬಿ ಅಬ್ದುಲ್ ಸತ್ತಾರ್ ಉದ್ಘಾಟಿಸುವರು. ಸಾಹಿತಿ ದೇವನೂರು ಮಹಾದೇವರ ಬದುಕು ಬರಹ ಕುರಿತು ಉಪನ್ಯಾಸಕ ರಾಮಣ್ಣ ಹಿರೇಬೇರ್ಗಿ ಉಪನ್ಯಾಸ ನೀಡುವರು. ಮುಖ್ಯಅತಿಥಿಗಳಾಗಿ ಜಿಲ್ಲಾ ಕಸಾಪ ಗೌರವಾಧ್ಯಕ್ಷ ಎಸ್. ಶರಣೇಗೌಡ, ಗೌರವ ಕಾರ್ಯದರ್ಶಿ ಎಸ್. ದೇವೇಂದ್ರಗೌಡ, ತಾಲೂಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀದೇವಿ ಶ್ರೀನಿವಾಸ್, ಎಪಿಎಮ್ಸಿ ನಿವೃತ್ತ ನೌಕರ ತಿಮ್ಮಪ್ಪ ಭಾಗವಹಿಸಲಿದ್ದಾರೆ. ತಾಲೂಕಿನ ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸ್ವರಚಿತ ಕವನವಾಚನ ಮಾಡುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲೂಕ ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಕೌದಿ ವೀರೇಶ ಗೋನವಾರ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

