ಪ್ರಾಥಮಿಕ ಶಿಕ್ಷಕರ 'ವರ್ಗ' ಕೌನ್ಸೆಲಿಂಗ್
ಗುಲ್ಬರ್ಗ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗಳನ್ನು 2013-14ನೇ ಸಾಲಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2007ರಂತೆ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದು ಗುಲ್ಬರ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಈ ಪ್ರಯುಕ್ತ ವರ್ಗಾವಣೆಗೆ ಸಂಬಂಧಿಸಿದ ವಿವಿಧ ದಿನಾಂಕಗಳಂದು ಕೌನ್ಸೆಲಿಂಗ್ನ್ನು ನಡೆಸಲಾಗುವುದು. ಪರಸ್ಪರ ವರ್ಗಾವಣೆಗೆ ಕೌನ್ಸೆಲಿಂಗ್ (ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಸಹ ಶಿಕ್ಷಕರು) 01 ರಿಂದ 47ರವರೆಗೆ ಜೂ.29ರಂದು ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಗುಲ್ಬರ್ಗದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗುವುದು. ಘಟಕದ ಒಳಗಿನ ಕೋರಿಕೆ ವರ್ಗಾವಣೆಗೆ ಕೌನ್ಸೆಲಿಂಗ್(ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು) 01ರಿಂದ 161ರವರೆಗೆ ಜು. 2ರಂದು ಬೆಳಗ್ಗೆ 10ಗಂಟೆಗೆ ನಡೆಸಲಾಗುವುದು. ಸಹ ಶಿಕ್ಷಕರ ವರ್ಗಾವಣೆ ಅಂತಿಮ ಪಟ್ಟಿಯ ಕ್ರಮ ಸಂಖ್ಯೆ 01ರಿಂದ 350ರವರೆಗೆ ಜು. 2ರಂದು ಬೆಳಗ್ಗೆ 10ಗಂಟೆಗೆ ನಡೆಸಲಾಗುವುದು. ಸಹ ಶಿಕ್ಷಕರ ವರ್ಗಾವಣೆಯ ಅಂತಿಮ ಪಟ್ಟಿಯ ಕ್ರಮ ಸಂಖ್ಯೆ 351 ರಿಂದ 850ರವರೆಗೆ ಜು. 3 ರಂದು ಬೆಳಗ್ಗೆ 10 ಗಂಟೆಗೆ ನಡೆಸಲಾಗುವುದು. ಸಹ ಶಿಕ್ಷಕರ ವರ್ಗಾವಣೆಯ ಅಂತಿಮ ಪಟ್ಟಿಯ ಕ್ರಮ ಸಂಖ್ಯೆ 851 ರಿಂದ ಪೂರ್ಣ ಮುಗಿಯುವವರೆಗೆ ಜು. 4 ರಂದು ಬೆಳಗ್ಗೆ 10 ಗಂಟೆಗೆ ಕೌನಘ್ಸಿಲಿಂಗ್ ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರಕಲಾ ಶಿಕ್ಷಕ ಪ್ರಶಸ್ತಿಗೆ ಅರ್ಜಿ
ಗುಲ್ಬರ್ಗ: ನಗರದ ದಿ ಐಡಿಯಲ್ ಫೈನ್ ಆರ್ಟ್ ಸೊಸೈಟಿಯು ಕಳೆದ 5 ವರ್ಷಗಳಿಂದ ಚಿತ್ರಕಲಾ ಶಿಕ್ಷಕರಿಗೆ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡುತ್ತ ಬಂದಿದ್ದು, 2013-14ನೇ ಸಾಲಿನ ಪ್ರಶಸ್ತಿಗೆ ಅರ್ಜಿ ಕರೆಯಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ. ವಿ.ಜಿ. ಅಂದಾನಿ ತಿಳಿಸಿದ್ದಾರೆ. ಕಲಾ ಶಿಕ್ಷಕರಾಗಿ ಇಲಾಖೆಯಲ್ಲಿ 20 ವರ್ಷ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದವರು ಮಾತ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಾಗಿ 20 ರು. ಪೋಸ್ಟಲ್ ಆರ್ಡರ್ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 30ರಂದು ಕೊನೆಯ ದಿನ. ಅರ್ಜಿಗಳನ್ನು ದಿ. ಐಡಿಯಲ್ ಫೈನ್ ಆರ್ಟ್ ಸಂಸ್ಥೆ, ಕಾರ್ಪೋರೇಷನ್ ಗಾರ್ಡನ್, ಗುಲ್ಬರ್ಗ- 585 105 ಕಳುಹಿಸಬಹುದು. ವಿವರಕ್ಕೆ ದೂ. 08472- 221358 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

