ರಾಯಚೂರು

ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ   ಯಾದಗಿರಿ   ಜೂ.28
ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಡಿಮೆ ಸಂಬಳ ನೀಡಿ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ. ಆಗಾಗ ಅವರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದ್ದು, ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಗೃಹ ಕಾರ್ಮಿಕರ ರಾಷ್ಟ್ರೀಯ ವೇದಿಕೆಯ ಆಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ಐರಿನ್ ಲೋಬೊ, ಮನೆ ಕೆಲಸಗಾರರಿಗೆ ಯೋಗ್ಯ ವೇತನ ನೀಡಿ ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕಿದೆ. ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಡಿಮೆ ಸಂಬಳದ ಜತೆಗೆ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ. ಅವರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಅನ್ಯಾಯ: ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಬಹುತೇಕ ಆರ್ಥಿಕವಾಗಿ ದುರ್ಬಲ ಸಮುದಾಯಗಳಿಂದ ಬಂದವರೇ ಹೆಚ್ಚಾಗಿರುತ್ತಾರೆ. ಅನಕ್ಷರಸ್ಥರು, ಕೌಶಲ್ಯರಹಿತರು ಮತ್ತು ನಗರದ ಕಾರ್ಮಿಕರ ಮಾರುಕಟ್ಟೆಯ ಅರಿವಿಲ್ಲದವರೇ ಈ ಗುಂಪಿನಲ್ಲಿ ಹೆಚ್ಚಿದ್ದಾರೆ. ಆದ್ದರಿಂದ ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಬೆಳಕಿಗೆ ಬಾರದೆ ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ದೂರಿದರು.
ವಂತಿಗೆ ಪಡೆಯುವ ಅವಕಾಶವಿರಲಿ: ಇತ್ತೀಚಿನ ದಿನಗಳಲ್ಲಿ ಮನೆಗೆಲಸಗಾರರಿಗೆ ಕಾನೂನು ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ಕೆಲವು ಕ್ರಮಗಳನ್ನು ಕೈಗೊಂಡಿದೆ. ಆದರೆ ಅದು ಇನ್ನೂ ಕಾರ್ಯಗತವಾಗಿಲ್ಲ. ಹೀಗಾಗಿ ಕಾನೂನು ಉದ್ಯೋಗ ನಿಯಂತ್ರಣಾ ಕೆಲಸದ ನಿಯಮಗಳು ಮತ್ತು ಸಾಮಾಜಿಕ ರಕ್ಷಣೆ ಏಕಕಾಲಕ್ಕೆ ಕೊಡುವಂತಿರಬೇಕು. ಮನೆಯಲ್ಲಿ ಕೆಲಸ ಮಾಡಿಸಿಕೊಳ್ಳುವ ಮಾಲೀಕರೇ ನೋಂದಣಿ ಮಾಡಿಸಿ, ಅವರಿಂದ ಸಾಮಾಜಿಕ ಭದ್ರತೆಗಾಗಿ ವಂತಿಗೆ ಪಡೆದುಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಸಂಪತ್ತಾ, ಲಲಿತಾ, ಶೋಭಾ, ಮಲ್ಲಮ್ಮ, ಈರಮ್ಮ, ನೀಲಮ್ಮ, ಕೇಸರಮ್ಮ, ಗೌರಮ್ಮ ವನಿಗೇರಾ, ಅನಂತಮ್ಮ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.