ರಾಯಚೂರು

ಸರ್ಕಾರಿ ಭೂ ಅತಿಕ್ರಮಣ: 'ಹೈ'ನಲ್ಲಿ ದಾವೆ- ಕುಷ್ಟಗಿ

Published On :

ರಾಯಚೂರು: ರಾಜ್ಯದಲ್ಲಿ 12 ಲಕ್ಷ ಎಕರೆ ಸಾರ್ವಜನಿಕ ಕೆರೆ ಕುಂಟೆಗಳು, ಗೋಮಾಳ, ಅರಣ್ಯ ಜಮೀನು ಅತಿಕ್ರಮಣವಾಗಿದ್ದು, ಈ ಬಗ್ಗೆ ಜನಸಂಗ್ರಾಮ ಪರಿಷತ್ ಹೈಕೋರ್ಟ್‌ಗೆ ದೂರು ಸಲ್ಲಿಸಿದೆ ಎಂದು ಜನಸಂಗ್ರಾಮ ಪರಿಷತ್ ಸಂಚಾಲಕ ರಾಘವೇಂದ್ರ ಕುಷ್ಟಗಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಮೀನು ಅತಿಕ್ರಮಣ ಅಧ್ಯಯನ ಸಮಿತಿಯು ರಾಜ್ಯದಲ್ಲಿ 12 ಲಕ್ಷ ಎಕರೆ ಸರ್ಕಾರಿ ಜಮೀನು ಅತಿಕ್ರಮಣವಾಗಿದೆ ಎಂದು ವರದಿ ಸಲ್ಲಿಸಿದ್ದು, ಆ ವರದಿಯಾಧರಿಸಿ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಜನಾಂದೋಲನದ ವತಿಯಿಂದ ಸುಪ್ರೀಂಕೋರ್ಟಿನಲ್ಲಿ ದಾವೆ ಹೂಡಲು ಮುಂದಾದಾಗ ಸುಪ್ರೀಂಕೋರ್ಟ್ ಈ ಕುರಿತು ಹೈಕೋರ್ಟ್‌ನಲ್ಲಿ ದಾವೆ ಹೂಡಲು ಸಲಹೆ ನೀಡಿದೆ ಎಂದು ತಿಳಿಸಿದರು.
ನೋಟಿಸ್ ಜಾರಿ: ಸುಪ್ರೀಂಕೋರ್ಟಿನ ಸೂಚನೆ ಹಿನ್ನೆಲೆ ರಾಜ್ಯ ಹೈಕೋರ್ಟ್‌ನಲ್ಲಿ ಇತ್ತೀಚೆಗೆ ಸಂಘಟನೆಯಿಂದ ಪ್ರಕರಣ ದಾಖಲಿಸಿದ್ದು, ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಹೈಕೋರ್ಟ್ ಪ್ರಕರಣವನ್ನು ತುರ್ತಾಗಿ ಕೈಗೆತ್ತಿಕೊಂಡಿದೆ. ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿಸಿದರು.
ವಿದೇಶಾಂಗ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ದಾರ್ಥ, ಮಾಜಿ ಸ್ಪೀಕರ್ ರಮೇಶಕುಮಾರ್ ಅವರೂ ಸೇರಿ ಅನೇಕ ರಾಜಕೀಯ ನಾಯಕರು ಸರ್ಕಾರಿ ಜಮೀನು ಅತಿಕ್ರಮಣ ಮಾಡಿಕೊಂಡಿದ್ದಾರೆಂದು ತಿಳಿಸಿದ ಅವರು, ಜಮೀನು ಮಂಜೂರಾತಿ ಸಮಿತಿಯ ಮೂಲಕ ಎಲ್ಲ ಪಕ್ಷಗಳ ಪ್ರಮುಖರು ಅರಣ್ಯ ಜಮೀನು ಮಂಜೂರು ಮಾಡಿಸಿಕೊಳ್ಳುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.