ರಾಯಚೂರು

ಬಾಕಿ ಪ್ರೋತ್ಸಾಹ ಧನ ವಿತರಣೆಗೆ 'ಆಶಾ' ಆಗ್ರಹ

Published On :

ರಾಯಚೂರು: ದೃಢೀಕರಣದ ಅಗತ್ಯವಿಲ್ಲದೇ ಪ್ರೋತ್ಸಾಹ ಧನ ನೀಡಬೇಕು. ಬಾಕಿ ಪ್ರೋತ್ಸಾಹಧನಕ್ಕಾಗಿ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ಶನಿವಾರ ನಗರದಲ್ಲಿ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತರು ಜಿಲ್ಲಾ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿ,  ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಕಿಯಿರುವ ಪ್ರೋತ್ಸಾಹ ಧನ ಕೂಡಲೇ ಪಾವತಿಸಬೇಕು.  
ಹೆರಿಗೆ ಪ್ರಕರಣಗಳಲ್ಲಿ ಯಾವುದೇ ರೀತಿಯ ದೃಢೀಕರಣವಿಲ್ಲದೇ ಪ್ರೋತ್ಸಾಹ ಧನ ನೀಡಬೇಕೆಂದು ಆದೇಶ ನೀಡುವಂತೆ ಒತ್ತಾಯಿಸಿದರು.
ಬಿಪಿಎಲ್ ಸೌಲಭ್ಯ ಹೊಂದಿದವರ ಹೆರಿಗೆ ಪ್ರಕರಣಗಳ ಸಂದರ್ಭ ನೀಡಬೇಕಾದ 600 ಪ್ರೋತ್ಸಾಹ ಧನವನ್ನು ಸಮರ್ಪಕವಾಗಿ ವಿತರಿಸಬೇಕು. ಬ್ಯಾಂಕ್ ಖಾತೆ ತೆಗೆಸಿದರೆ ಮಾತ್ರ ಪ್ರೋತ್ಸಾಹ ಧನ ನೀಡಲಾಗುವುದೆಂಬ ಷರತ್ತು ಕೈಬಿಡಬೇಕೆಂದು ಆಗ್ರಹಿಸಿದರು.
ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ನಾಗರಾಜ್ ಅವರು ಜುಲೈ ಮೊದಲ ವಾರದಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ದೃಢೀಕರಣದ ಸಮಸ್ಯೆ ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.ಬ್ಯಾಂಕ್ ಖಾತೆ ತೆರೆಯುವುದಕ್ಕೆ ಸಂಬಂಧಿಸಿ ಉಂಟಾಗಿರುವ ಸಮಸ್ಯೆ ನಿವಾರಣೆಗೆ ಜಿಲ್ಲಾ ಅಗ್ರಣಿ ಬ್ಯಾಂಕಿನ ಅಧಿಕಾರಿಗಳಿಗೆ ಶೀಘ್ರದಲ್ಲಿಯೇ ಪತ್ರ ಬರೆದು ಅನುಕೂಲ ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ   ವೀರೇಶ್ ಎನ್.ಎಸ್, ತಾಯಮ್ಮ, ಲಕ್ಷ್ಮಿ, ಮಹೇಶ್ ಚೀಕಲಪರ್ವಿ, ಸುಜಾತಾ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.