ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ರಾಯಚೂರು: ತಾಲೂಕಿನ ಕಲ್ಮಲಾ ವಿದ್ಯುತ್ ವಿತರಣೆ ಕೇಂದ್ರದ ವ್ಯಾಪ್ತಿಯಲ್ಲಿ ಜೂ.30 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ತಿಳಿಸಿದೆ. ಅಂದು ಕಲ್ಮಲಾ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪವರ್ ಗ್ರೀಡ್ನ ಮುಖ್ಯ ದ್ವಾರದಲ್ಲಿ 33ಕೆವಿ ಕೇಬಲ್ ಅಳವಡಿಕೆ ಹಾಗೂ 33 ಕೆವಿ ಮಾರ್ಗ ಸ್ಥಳಾಂತರ ಕಾಮಗಾರಿ ಹಿನ್ನೆಲೆ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಕಲ್ಮಲಾ ಹಾಗೂ ಅದರ ಸುತ್ತಲಿನ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಜೆಸ್ಕಾಂ ಮನವಿ ಮಾಡಿದೆ.
ಬಜೆಟ್: ನಾಳೆ
ಸಿಪಿಐ ಧರಣಿ
ರಾಯಚೂರು: ಭಾರತೀಯ ಕಮ್ಯುನಿಸ್ಟ್ ಪಕ್ಷದಿಂದ ರಾಜ್ಯಬಜೆಟ್ ಪೂರ್ವದಲ್ಲಿ 10 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.1ರಂದು ಬಜೆಟ್ ಪೂರ್ವ ಜನಾಗ್ರಹ ಚಳವಳಿ ಆಯೋಜಿಸಲಾಗಿದೆ.ಈ ಕುರಿತು ಪಕ್ಷವು ಪ್ರಕಟಣೆ ನೀಡಿದ್ದು, ಸರ್ಕಾರ ಬಜೆಟ್ನಲ್ಲಿ ಸೇರ್ಪಡೆಗೊಳಿಸಬೇಕಾದ ಅಂಶಗಳ ಬಗ್ಗೆ ಗಮನ ಸೆಳೆಯುವ ಉದ್ದೇಶದಿಂದ ಜು.1ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸಿಪಿಐ ಒಂದು ದಿನದ ಧರಣಿ ಆಯೋಜಿಸಲಾಗಿದೆ ಎಂದು ಪಕ್ಷ ತಿಳಿಸಿದೆ.
ಗುಲ್ಬರ್ಗಕ್ಕೆ ನಾಳೆ ಹೈಕ ಉಪ ಸಮಿತಿ
ಯಾದಗಿರಿ: ಸಂವಿಧಾನದ 371 (ಜೆ) ಕಲಂ ಅಡಿ ಹೈದರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ, ಈ ಪ್ರದೇಶದ ಜನರಿಗೆ ಸಾರ್ವಜನಿಕ ಹುದ್ದೆಗಳಲ್ಲಿ ಮೀಸಲಾತಿ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಮೀಸಲಾತಿ ಸೌಲಭ್ಯಗಳನ್ನು ಒದಗಿಸಲು ನಿಯಮಗಳನ್ನು ಪರಿಶೀಲಿಸಿ ವರದಿಯನ್ನು ನೀಡಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿದೆ. ಈ ಸಮಿತಿಯು ಜು.1ರಂದು ಗುಲ್ಬರ್ಗಕ್ಕೆ ಆಗಮಿಸಲಿದೆ. ಈ ಸಮಿತಿ ಜು.1ರಂದು ಮಧ್ಯಾಹ್ನ 12 ಗಂಟೆಯಿಂದ ಗುಲ್ಬರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೈ.ಕ ಪ್ರದೇಶದ ಜಿಲ್ಲೆಗಳ ಸಂಸತ್ ಸದಸ್ಯರ ಹಾಗೂ ಶಾಸಕರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲಿದೆ. ಅಲ್ಲದೇ ಹೈಕ ಹೋರಾಟ ಸಮಿತಿ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ, ಸಲಹೆಗಳನ್ನು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಸಾರ್ವಜನಿಕರು ಮತ್ತು ವಿವಿಧ ಸಂಘ ಸಂಸ್ಥೆಗಳು ಹೈ.ಕ. ಪ್ರದೇಶದಲ್ಲಿ ಒದಗಿಸಬಹುದಾದ ವಿವಿಧ ಸೌಲಭ್ಯಗಳ ಕುರಿತ ಅಭಿಪ್ರಾಯ ಮತ್ತು ಸಾರಾಂಶಗಳನ್ನು ಬುಲೆಟ್ ಪಾಯಿಂಟ್ ಮಾದರಿಯಲ್ಲಿ ತಯಾರಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜೂ. 30ರ ಸಂಜೆ 5 ಗಂಟೆಯೊಳಗಾಗಿ ಚುನಾವಣಾ ಶಾಖೆ ಶಿರಸ್ತೆದಾರ ಪಿ. ಮಲ್ಲಿಕಾರ್ಜುನ ಅವರಿಗೆ ನೀಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

