ಅಲ್ಪಸಂಖ್ಯಾತ ಸ್ಕಾಲರ್ಶಿಪ್; ಅರ್ಹರಿಂದ ಅರ್ಜಿ ಆಹ್ವಾನ
ಸಿಂಧನೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶನಾಲಯದಿಂದ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ, ಬುದ್ಧ, ಜೈನ ಜನಾಂಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 2013-14ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನಕನಗರ ಸಿಆರ್ಪಿ ವೀರೇಶ ಗೋನವಾರ ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, 2013-14ನೇ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 10 ನೇ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ಹಾಗೂ ಹಿಂದಿನ ತರಗತಿಗಳಲ್ಲಿ ಶೇ.50ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಪಾಲಕರಿಗೆ ಅರ್ಜಿ ಸಲ್ಲಸಲು ಸೂಕ್ತ ಮಾರ್ಗದರ್ಶನ ನೀಡುವುದು. ಪಾಲಕರು, ವಿದ್ಯಾರ್ಥಿಗಳು ಆಯಾ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 05 ಕಡೆಯ ದಿನವಾಗಿರುತ್ತದೆ.
ಪಾಲಕರು ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಹಿಂದಿನ ವರ್ಷದ ಅಂಕಪಟ್ಟಿ ಮತ್ತು ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಪ್ರಮಾಣಪತ್ರದ ದೃಢೀಕೃತ ಪ್ರತಿ ಅಥವಾ ರು. 20 ಛಾಪಾ ಕಾಗದದ ಮೇಲೆ ಬರೆದ ಆದಾಯದ ಅಫಿಡವಿಟ್ ಮೂಲಪ್ರತಿಯನ್ನು ಲಗತ್ತಿಸುವುದು. ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವವರು ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಪರ್ಮನಂಟ್ ಐಡಿ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕಿನ ಹೆಸರು, ಕಳೆದ ವರ್ಷಕ್ಕೆ ಮಂಜೂರಾದ ವಿದ್ಯಾರ್ಥಿ ವೇತನವನ್ನು ನಮೂದಿಸಬೇಕು. ಆಯಾ ಶಾಲೆಗಳ ಮುಖ್ಯಗುರುಗಳು ಎಲ್ಲಾ ಮಕ್ಕಳ ಅರ್ಜಿಗಳನ್ನು ಪಾಲಕರಿಂದ ಪಡೆದು ಹೊಸ ನಮೂನೆ ಮತ್ತು ನವೀಕರಣ ನಮೂನೆಗಳಲ್ಲಿ ಪ್ರತ್ಯೇಕವಾಗಿ ಭರ್ತಿ ಮಾಡಿ, ಆಗಸ್ಟ್14ರೊಳಗೆ ಬಿಇಒ ಕಚೇರಿಗೆ ಸಲ್ಲಿಸಲು ತಿಳಿಸಿದ್ದಾರೆ. ಆಯ್ಕೆ ಪಟ್ಟಿ: 2012-13ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಮಂಂಜೂರಿಯಾಗಿದ್ದು, ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಅವರ ಖಾತೆಗಳಿಗೆ ನೇರವಾಗಿ ಹಣ ಸಂದಾಯ ಮಾಡಲಾಗಿದೆ. ಖಾತೆಯನ್ನು ಹೊಂದಿರದ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ಸಂದಾಯ ಮಾಡಲಾಗುವುದು. ಮುಖ್ಯೋಪಾಧ್ಯಾಯರು, ಪಾಲಕರು, ವಿದ್ಯಾರ್ಥಿಗಳು ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.
ಸ್ವಚ್ಛತಾ ಆಂದೋಲನ : ಮದುಗಲ್ ಪಟ್ಟಣ ಪಂಚಾಯಿತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸರ್ಕಾರ ಆದೇಶದಂತೆ ಭಾನುವಾರ ಪಟ್ಟಣದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ, ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾರ್ಯ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪ.ಪಂ.ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮೀ, ಸದಸ್ಯರಾದ ವೀರೇಶ ವಡ್ಡರ, ಮಾಸೂಮ ಷರೀಫ್, ಬಂದೇನವಾಜ, ಎಪಿಎಂಸಿ ಉಪಾಧ್ಯಕ್ಷ ಎಸ್.ಆರ್.ರಸೂಲ್, ಮುಖಂಡರಾದ ರಾಮಣ್ಣ ಹಿರೇಮನಿ, ಚಂದ್ರಶೇಖರ ವಕೀಲರು, ಚಂದಾವಲಿ ಹಳೇಪೇಟೆ, ಪಟ್ಟಣ ಪಂಚಾಯಿತಿ ಸಿಬ್ಬಂದಿ ಇಪ್ತೆಕಾರ್, ನೈರ್ಮಲ್ಯಾಧಿಕಾರಿ ಜಿಲಾನಿ, ಪೌರ ಕಾರ್ಮಿಕರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

