ಪುರಸಭೆ ಚುನಾವಣೆ ನಂತರ ಪಕ್ಷಾಂತರ ಕುರಿತ ನಿರ್ಧಾರ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಮಾ.2
ಇಂದಿನ ದಿನಮಾನಗಳಲ್ಲಿ ಪಕ್ಷಾಂತರ ಸಾಮಾನ್ಯ ಸಂಗತಿಯಾಗಿದ್ದು, ಪುರಸಭೆ ಚುನಾವಣೆ ನಂತರ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಮಾಜಿ ಸಚಿವ, ಸುರಪುರ ಶಾಸಕ ರಾಜುಗೌಡ ನಾಯಕ ತಿಳಿಸಿದರು.
ತಾಲೂಕಿನ ಜಾವೂರ್ ಕ್ರಾಸ್ ಬಳಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಕರ್ನಾಟಕ ಬಂಜಾರ ಸಂಘದಿಂದ ಹಮ್ಮಿಕೊಂಡಿದ್ದ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ರಾಜಕೀಯ ಗಮನಿಸಿದರೆ ವಿವಿಧ ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಸರ್ವೆ ಸಾಮಾನ್ಯ. ಈಗಾಗಲೇ ನಾನು ಬಿಜೆಪಿಯಲ್ಲಿ ಇರುವ ಅಥವಾ ಬೇರೆ ಪಕ್ಷ ಸೇರುವ ಕುರಿತು ತೀರ್ಮಾನ ತೆಗೆದುಕೊಂಡಿದ್ದು, ಪುರಸಭೆ ಚುನಾವಣೆ ಮುಗಿದ ನಂತರ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕ ಮಾತನಾಡಿ, ಯಾವುದೇ ಒಂದು ಪಕ್ಷದಿಂದ ಆರಿಸಿ ಬಂದ ಪ್ರತಿನಿಧಿಗಳು ಆಯಾ ಪಕ್ಷದ ಅಭಿವೃದ್ಧಿ, ಸಂಘಟನೆ ಮಾಡುವುದು ಅವರ ಕರ್ತವ್ಯ. ಯಾವುದೆ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯಿಲ್ಲ. ಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ರಾಯಚೂರು ಗ್ರಾಮೀಣ ಮತ್ತು ಮಸ್ಕಿ ಕ್ಷೇತ್ರಗಳ ಜವಾಬ್ದಾರಿ ವಹಿಸಿದರೆ ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದರು. ಶಾಸಕ ಮಾನಪ್ಪ ವಜ್ಜಲ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

