ರಾಯಚೂರು

ಸಂಕ್ಷಿಪ್ತ ಸುದ್ದಿ

Published On :

ನಾಳೆ ಪರಿಸರ ಮಿತ್ರ ಪ್ರಶಸ್ತಿ ಪ್ರದಾನ
ರಾಯಚೂರು: ನಗರದ ಮಂತ್ರಾಲಯಂ ರಸ್ತೆಯಲ್ಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಾ.4 ರಂದು ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11ಕ್ಕೆ ಸಮಾರಂಭವನ್ನು ಜಿಪಂ ಸಿಇಒ ಜ್ಞಾನ ಪ್ರಕಾಶ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ನಾಗರಾಜು ಅಧ್ಯಕ್ಷತೆ ವಹಿಸಿ ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್ಪಿ ಎಸ್.ಬಿ.ಬಿಸನಳ್ಳಿ, ಪರಿಸರ ಅಧಿಕಾರಿ ಗೋಪಾಲಕೃಷ್ಣ ಸಣತಂಗಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಪ್ರೊ. ಸಿ.ಡಿ. ಪಾಟೀಲ್, ಡಿಡಿಪಿಐ ಪರಮೇಶ್ವರ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಕಚೇರಿ ತಿಳಿಸಿದೆ.
ಪರೀಕ್ಷೆ: 5ರಂದು ವಿಶೇಷ ಕಾರ್ಯಾಗಾರ
ರಾಯಚೂರು: ಶಾವಂತಗೇರಿ ಬಸವರಾಜ ಪಾಟೀಲ್ ಪ್ರತಿಷ್ಠಾನ ಹಾಗೂ ಟಾಗೋರ್ ಸ್ಮಾರಕ ಪದವಿ ಪೂರ್ವ ಮಹಾವಿದ್ಯಾಲಯಗಳ ಆಶ್ರಯದಲ್ಲಿ ಮಾ.5ರಂದು ಪರೀಕ್ಷೆಗಳನ್ನು ಎದುರಿಸುವ ಮನೋಬಲ ಹಾಗೂ ಧೈರ್ಯ ಕುರಿತ ವಿಶೇಷ ಕಾರ್ಯಾಗಾರ ಆಯೋಜಿಸಲಾಗಿದೆ. ನಗರದ ಟಾಗೋರ್ ಸಭಾಂಗಣದಲ್ಲಿ ಅಂದು ಬೆಳಗ್ಗೆ 10ಕ್ಕೆ ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಪಾಪಾರೆಡ್ಡಿ ವಹಿಸುವರು. ಮನೋರೋಗ ತಜ್ಞ ಡಾ.ವಿ.ಎ.ಮಾಲಿಪಾಟೀಲ್ ವಿಷಯ ಮಂಡಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಮಾಚನೂರು ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಆರ್.ಕೆ.ಅಮರೇಶ್, ಸುಭಾಷ್ ಪಾಟೀಲ್, ಭೀಮನಗೌಡ ಇಟಗಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆಂದು ಕಾಲೇಜಿನ ತಿಳಿಸಿದೆ.

ಗಸ್ತಿಗೆ ಸವಿತಾ ಸೂರ್ಯ ಪ್ರಶಸ್ತಿ ಪ್ರದಾನ
ಕ.ಪ್ರ. ವಾರ್ತೆ, ರಾಯಚೂರು, ಮಾ.2
ಬೆಂಗಳೂರಿನಲ್ಲಿ ಇತ್ತೀಚೆಗೆ ರಾಜ್ಯ ಸವಿತಾ ಸಮಾಜದಿಂದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಗಸ್ತಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಅಶೋಕ್ ಗಸ್ತಿ ಅವರಿಗೆ ಸವಿತಾ ಸೂರ್ಯ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ಸಮಾಜದ ಸಂಘಟನೆ, ಅಭಿವೃದ್ಧಿ ಹಾಗೂ ಎಲ್ಲಾ ಸಮಾಜಗಳ ಜತೆ ಗೌರವದಿಂದ ಬಾಳುವ ಪರಿಸರ ನಿರ್ಮಾಣಕ್ಕೆ ಶ್ರಮಿಸುವುದಾಗಿ ಹೇಳಿದರು.
ಸಮಾಜದಲ್ಲಿ ಜಾಗೃತಿ, ಸಂಘಟನೆ, ಶಿಸ್ತು, ವಿದ್ಯಾವಂತಿಕೆ, ಆರ್ಥಿಕವಾಗಿ ಬೆಳೆಯುವ ಆಲೋಚನೆಗಳು ಪ್ರತಿಯೊಬ್ಬರಲ್ಲಿ ಮೂಡಬೇಕು. ಕೀಳರಿಮೆ ದೂರವಾಗಿ ಸಂಕುಚಿತ ಮನೋಭಾವ ತೊರೆಯಬೇಕು. ಬೇರೆಯವರ ದೂಷಿಸದೇ ಸಮಾಜದ ಪ್ರಗತಿಗೆ ಪೂರಕ ಚಿಂತನೆ ನಡೆಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಮಾಜದ ರಾಜ್ಯಾಧ್ಯಕ್ಷ ಎನ್. ಸಂಪತ್  ಕುಮಾರ್ ಮಾತನಾಡಿ, ಅಶೋಕ್ ಗಸ್ತಿಯವರು ತಮ್ಮ ಸ್ವಂತ ಪರಿಶ್ರಮ ಬುದ್ದಿವಂತಿಕೆಯಿಂದ ಸಾಧನೆ ಮೆರೆದಿದ್ದಾರೆ. ಅವರು ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ರಾಜ್ಯಾಧ್ಯಕ್ಷ ಪ್ರೊ.ಎನ್.ನರಸಿಂಹಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಾಂಜನೇಯಲು, ರಾಜ್ಯ ಸಂಚಾಲಕ ವೇಣುಗೋಪಾಲ, ವಿಭಾಗೀಯ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧ್ಯಕ್ಷರು, ಪ್ರತಿನಿಧಿಗಳು, ಸಂಗೀತ ವಿದ್ವಾಂಸರು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.