ರಾಯಚೂರು

ಮಕ್ಕಳ ಸಹ ಪಠ್ಯ ಚಟುವಟಿಕೆ ಪ್ರೋತ್ಸಾಹಿಸಿ

Published On :

ಸಿಂಧನೂರು: ಕೇವಲ ಓದು, ಬರಹ, ಲೆಕ್ಕಗಳಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗಲು ಸಾಧ್ಯವಿಲ್ಲ. ಪಾಲಕರಾದವರು ತಮ್ಮ ಮಕ್ಕಳ ಸಹ ಪಠ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುವುದು ಅಗತ್ಯ ಎಂದು ಸ್ಥಳೀಯ ಬಿಆರ್‌ಸಿ ಕೇಂದ್ರದ ಬಿಆರ್‌ಪಿ ಮಲ್ಲಪ್ಪ ಬಾದರ್ಲಿ ಹೇಳಿದರು.
ನಗರದ ಜನತಾ ಕಾಲೋನಿಯ ಒಳಬಳ್ಳಾರಿ ಚನ್ನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಬೆಳವಣಿಗೆಯನ್ನು ಶಿಕ್ಷಣ ಹಾಗೂ ಮಾನವ ಸಂಪನ್ಮೂಲದಿಂದ ಅಳೆಯಲಾಗುತ್ತಿದೆ. ಅದರಂತೆ ದೇಶದ ನಿರ್ಮಾಣದ ಭವಿಷ್ಯದ ಭಾವಿ ಪ್ರಜೆಗಳನ್ನು ನಿರ್ಮಿಸುವ ಗುರುತರ ಜವಾಬ್ದಾರಿ ಶಿಕ್ಷಕರ, ಸಮುದಾಯ ಮತ್ತು ಪಾಲಕರ ಮೇಲಿದೆ ಎಂದರು.
ಶಿಕ್ಷಕರೊಂದಿಗೆ ಕೈಜೋಡಿಸಿ: ಕನಕನಗರ ಸಿಆರ್‌ಪಿ ವೀರೇಶ ಗೋನವಾರ ಮಾತನಾಡಿ, ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವಲ್ಲಿ ಶಾಲಾ ಶಿಕ್ಷಕರೊಂದಿಗೆ ಕೈಜೋಡಿಸಬೇಕು. ಮಕ್ಕಳನ್ನು ಪುಸ್ತಕ ಹುಳಗಳ್ಳನ್ನಾಗಿ ಮಾಡಬೇಡಿ. ಅರ್ಹತೆ, ಅನುಭವ ಹೊಂದಿರುವ ಶಿಕ್ಷಕರಿರುವ ಶಾಲೆಗಳಿಗೆ ಮಾತ್ರ ತಮ್ಮ ಮಕ್ಕಳನ್ನು ಸೇರಿಸಬೇಕು. ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು, ನಾಳಿನ ಸುಂದರ ಸಮಾಜಕ್ಕಾಗಿ ಮಕ್ಕಳನ್ನು ಸಜ್ಜುಗೊಳಿಸಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯಗುರು ಬಿ.ಶಿವಕುಮಾರ ಕೋಟೆ ಮತ್ತು ಜನತಾ ಕಾಲೋನಿಯ ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರಾಚನಗೌಡ ಮಾತನಾಡಿದರು.
ವಿದ್ಯಾರ್ಥಿನಿ ಜ್ಯೋತಿ ಪ್ರಾರ್ಥಿಸಿದಳು. ಶಿಕ್ಷಕಿ ರಾಧಾ ಸ್ವಾಗತಿಸಿದರು.
  ಶಿಕ್ಷಕ ನಾಗೇಶ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಪಂಪಾಪತಿ ಕೆ.ಎಸ್. ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಸಮಾರಂಭದ ನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕಣತಿಕ ಕಾರ್ಯಕ್ರಮಗಳು ಜನಮನಸೂರೆಗೊಂಡವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.