ಕರವೇ ಮಾನವಿ ಘಟಕ ವಿಸರ್ಜನೆ
ರಾಯಚೂರು: ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಮಾನವಿ ತಾಲೂಕು ಘಟಕವನ್ನು ವಿಸರ್ಜಿಸಿರುವುದಾಗಿ ಜಿಲ್ಲಾಧ್ಯಕ್ಷ ವಿನೋದರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಘಟಕದ ಗಮನಕ್ಕೆ ತಾರದೇ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕರವೇ ಮಾನವಿ ಘಟಕದ ಅಧ್ಯಕ್ಷ ಶ್ರೀಕಾಂತ ಗೂಳಿ ಸ್ಪರ್ಧಿಸಿದ್ದಾರೆ. ಅವರನ್ನು ಪದಾಧಿಕಾರಿಗಳೂ ಬೆಂಬಲಿಸಿರುವ ಹಿನ್ನೆಲೆಯಲ್ಲಿ ಕರವೇ ಮಾನವಿ ತಾಲೂಕು ಘಟಕವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಾನವಿ ಕರವೇ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಸತಿ ಶಾಲೆಗೆ ಆಯ್ಕೆ
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ವಿದ್ಯಾಜ್ಯೋತಿ ಶಿಕ್ಷಣ ಅಭಿವೃದ್ಧಿ ಟ್ರಸ್ಟ್ ನ 6 ಜನ ವಿದ್ಯಾರ್ಥಿನಿಯರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಶ್ರೀ ಮುದಗಲ್, ಕಾವ್ಯ ವಡಗೇರಾ, ಪೂಜಾ ಹಿರೇಜಾವೂರ, ಪಲ್ಲವಿ ಪಾತಾಪೂರ, ಮಾನಸ ಶೆಟ್ಟಿ, ಸೌಜನ್ಯ ಅವರು ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಪೀಪಲ್ಸ್ ಪಾರ್ಟಿ ಅಭ್ಯರ್ಥಿಗಳು
ರಾಯಚೂರು: ಜಿಲ್ಲೆಯಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮೂರು ಕ್ಷೇತ್ರಗಳಿಗೆ ಪೀಪಲ್ಸ್ ಪಾರ್ಟಿ ಆಫ್ ಇಂಡಿಯಾ(ಎಸ್) ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಪಾರ್ಟಿಯ ಜಿಲ್ಲಾಧ್ಯಕ್ಷ ಎಲ್.ಸಾಲೋಮನ್, ರಾಯಚೂರು ನಗರ ವಿಧಾನಸಭೆ ಕ್ಷೇತ್ರಕ್ಕೆ ಸಾವೇ ಸ್ಪರ್ಧಿಸುತ್ತಿದ್ದು, ಸಿಂಧನೂರು ಕ್ಷೇತ್ರಕ್ಕೆ ವಿ.ಎಸ್. ಬಸವರಾಜು, ಲಿಂಗಸ್ಗೂರು ಕ್ಷೇತ್ರಕ್ಕೆ ಸುರೇಶ್ ಬಾಬು ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಮಾರ್ಚ್ ಎರಡನೇ ವಾರದಲ್ಲಿ ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಕಾಶೀರಾವ್ ನಿಧನ; ಸಮಿತಿ ಸಂತಾಪ
ರಾಯಚೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ರಾಯಚೂರು ಸ್ವಚ್ಛಗೊಳಿಸಿ ಹೋರಾಟ ಸಮಿತಿಯ ಸಲಹೆಗಾರರಾಗಿದ್ದ ಕಾಶೀರಾವ್ ಪಾಟೀಲ್ ಅವರ ನಿಧನಕ್ಕೆ ರಾಯಚೂರು ಸ್ವಚ್ಛಗೊಳಿಸಿ ಹೋರಾಟ ಸಮಿತಿ ತೀವ್ರ ಶೋಕ ವ್ಯಕ್ತಪಡಿಸಿ ಪ್ರಕಟಣೆಯನ್ನು ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

